Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರವಾಗಿ ಸಮೀಕ್ಷೆ ನಡೆಸಿ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ


ಮೈಸೂರು; ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾಗಿದ್ದು, ಈ ಸಂಬAಧ ಪರಿಸ್ಥಿತಿಯನ್ನು ಅವಲೋಕಿಸಲು ಬೆಳೆ ಹಾನಿ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದೆ. ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರ ಸಮೀಕ್ಷೆ ನಡೆಸಿ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.
ಶುಕ್ರವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೆಂಪನಹಳ್ಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಳೆಯ ಕೊರತೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಬೆಳೆಗಳ ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡುಬAದಿದೆ. ಹುಣಸೂರು ಭಾಗದಲ್ಲೂ ಹೊಗೆಸೊಪುö್ಪ ಬೆಳೆಯ ಗುಣಮಟ್ಟ ಹಾಗೂ ಇಳುವರಿ ಕಡಿಮೆಯಾಗಿದೆ. ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗಿರುವ ಪೈಕಿ ಸುಮಾರು 2,000 ಹೆಕ್ಟೇರ್ ಪ್ರದೇಶದಲ್ಲಿ ಹೊಗೆಸೊಪುö್ಪ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆಯಾಗಿಲ್ಲ ಎಂದರು.
ಮೆಕ್ಕೆ ಜೋಳದ ಬೆಳೆಗೆ ಬಿಳುಸುಳಿ ರೋಗ ತೀವ್ರವಾಗಿ ಬಾಧಿಸುತ್ತಿದೆ. ಒಂದೇ ಭೂಮಿಯಲ್ಲಿ ನಿರಂತರವಾಗಿ ಒಂದೇ ರೀತಿಯ ಬೆಳೆ ಬೆಳೆಯುತ್ತಿರುವುದರಿಂದ ಮಣ್ಣಿನ ಫಲವತ್ತತೆ ಕುಗ್ಗಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ತಡೆಯಲು ಕಷ್ಟಸಾಧ್ಯವಾಗಿದ್ದು, ಒಮ್ಮೆ ಬಂದರೆ ರೋಗ ಹೋಗಲಾಡಿಸಿ ಇಳುವರಿ ಹೆಚ್ಚಿಸುವುದು ಕಷ್ಟ. ಮೆಕ್ಕೆ ಜೋಳ ಅಥವಾ ಇತರೆ ಬೆಳೆಗಳ ನಷ್ಟಕ್ಕೆ ಹಾಗೂ ರಾಗಿ ಬೆಳೆಗೆ ಬೆಂಬಲ ಬೆಲೆ ಅಥವಾ ಪರಿಹಾರ ಒದಗಿಸುವ ಕುರಿತು ಸರ್ಕಾರದ ಹಂತದಲ್ಲಿ ಹಾಗೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರೈತರಿಂದ ಖರೀದಿಸಲಾದ ರಾಗಿಯ ಪಾವತಿ ಬಾಕಿ ಉಳಿದಿರುವ ಬಗ್ಗೆ ಮನವಿಗಳು ಬಂದಿದ್ದು, ಈ ವಿಚಾರವಾಗಿ ಸಂಬAಧಪಟ್ಟ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಬಾಕಿ ಹಣವನ್ನು ಶೀಘ್ರದಲ್ಲಿಯೇ ರೈತರ ಖಾತೆಗಳಿಗೆ ಜಮೆ ಮಾಡಲು ಸೂಚನೆ ನೀಡಲಾಗುವುದು.
ಎನ್.ಡಿ.ಆರ್.ಎಫ್ ನಿಯಮಗಳ ಅಡಿಯಲ್ಲಿ ಬೆಳೆ ರೋಗಗಳಿಗೆ ನೇರವಾಗಿ ಪರಿಹಾರ ನೀಡುವ ಯಾವುದೇ ನಿರ್ದಿಷ್ಟ ಅವಕಾಶ ಇಲ್ಲ. ಮಳೆಯಾಶ್ರಿತ ಬೆಳೆ ನಷ್ಟಗಳಿಗೆ ಮಾತ್ರ ನಿಯಮಗಳು ಅನ್ವಯಿಸುತ್ತವೆ. ಅಧಿಕಾರಿಗಳು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ ವಾಸ್ತವ ವರದಿ ಸಲ್ಲಿಸಬೇಕು. ರೈತರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.