Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭಕ್ತರಿಂದ ತುಂಬಿ ತುಳುಕಿದ ಚಾಮುಂಡಿಬೆಟ್ಟ; ಮಹಾಲಕ್ಷಿö್ಮ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿ ದೇವತೆ ಚಾಮುಂಡೇಶ್ವರಿ


ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಭಕ್ತಸಾಗರವೇ ಹರಿದುಬಂದಿತ್ತು. ಇದರಿಂದಾಗಿ ಭಕ್ತರಿಂದ ಬೆಟ್ಟ ತುಂಬಿ ತುಳುಕಿತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾಗಿ ಜೈ ಚಾಮುಂಡೇಶ್ವರಿ ಎಂದು ಮುಗಿಲು ಮುಟ್ಟುವಂತೆ ಘೋಷಣೆಗಳನ್ನು ಕೂಗಿದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು.
ಬೆಟ್ಟದ ತಾಯಿಯ ದರ್ಶನ ಪಡೆಯಲೆಂದು ಮುಂಜಾನೆಯಿAದಲೇ ತುಂತುರು ಮಳೆಯನ್ನೂ ಲೆಕ್ಕಿಸದೆ ಮುಂಜಾನೆಯಿAದಲೇ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು. ದೇವಸ್ಥಾನದ ಹೊರಗೆ ತುಂತುರು ಮಳೆ ಸುರಿಯುತ್ತಿದ್ದರೆ, ದೇವಸ್ಥಾನದ ಒಳಗೆ, ಸರತಿ ಸಾಲಿನಲ್ಲಿ ಜಯಘೋಷಗಳು ಮೊಳಗುತ್ತಿದ್ದವು. ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು. ಮುಂಜಾನೆಯಿAದಲೇ ಪೂಜೆ: ಕಡೆಯ ಆಷಾಢ ಶುಕ್ರವಾರವಾದ್ದರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮುಂಜಾನೆ 3 ಗಂಟೆಯಿAದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೊಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಮಹಾಲಕ್ಷಿ÷್ಮ ಅಲಂಕಾರ: ಕಳೆದ ಮೂರು ವಾರಗಳಂತೆ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊAಡಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಮಹಾಲಕ್ಷಿ÷್ಮ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಅಲಂಕೃತಗೊAಡಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊAಡಿತ್ತು. ವಿಶೇಷವಾಗಿ ಅಲಂಕೃತಗೊAಡು ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯ ದರ್ಶನ ಪಡೆದು ಹೊರಬರುತ್ತಿದ್ದ ಭಕ್ತರಲ್ಲಿ ದನ್ಯತಾಭಾವ ಮೂಡಿತ್ತು.
ಹರಕೆ ತೀರಿಸಿದರು: ಬೆಟ್ಟಕ್ಕೆ ಮುಂಜಾನೆಯಿAದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್‌ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು.
ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಮಲ್ಟಿ ಲೆವೆಲ್ ಪಾರ್ಕಿಂಗ್ ಸ್ಥಳದಲ್ಲಿ ಯಶವಂತಪುರ ಭೀಮನಕುಪ್ಪೆಯ ಜಿ.ಕೆ.ಫೌಂಡೇಷನ್‌ನ ಸವಿತಾ ಮಹೇಶ್ ಅವರು ಪ್ರಸಾದದ ವ್ಯವಸ್ಥೆ ಮಾಡಿದ್ದರು. ಬೆಳಗ್ಗೆ ಪೊಂಗಲ್, ಕೇಸರಿಬಾತ್, ಉಪ್ಪಿಟ್ಟು, ಬೋಂಡಾ, ಮಧ್ಯಾಹ್ನ ಪಲಾವ್, ಮೈಸೂರ್ ಪಾಕ್, ಅನ್ನ ಸಾಂಬಾರ್ ವಿತರಿಸಲಾಯಿತು.
ದರ್ಶನ ಪಡೆದ ಗಣ್ಯರು; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ, ಮಾಂಕಾಳ ವೈದ್ಯ, ಶಾಸಕ ಎಚ್.ಡಿ.ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ, ಮಾಜಿ ಸಂಸದ ಪ್ರತಾಪಸಿಂಹ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ತೆಲುಗು ಹಾಸ್ಯನಟ ಸುನಿಲ್ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ವಿಐಪಿಗಳ ಹಾವಳಿ;
ಕಡೆಯ ಆಷಾಢ ಶುಕ್ರವಾರ ಬೆಟ್ಟದಲ್ಲಿ ವಿಐಪಿಗಳು, ಶಿಫಾರಸ್ಸು ಪತ್ರ ತಂದವರ ಹಾವಳಿ ಹೆಚ್ಚಾಗಿತ್ತು. ಸಚಿವರು, ಶಾಸಕರು, ಸಂಸದರ ಶಿಫಾರಸ್ಸು ಪತ್ರ ಹಿಡಿದು ಬಂದ ಸಾವಿರಾರು ಮಂದಿ ದೇವಸ್ಥಾನಕ್ಕೆ ಬಿಡುವಂತೆ ಮುಗಿಬಿದ್ದರು. ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ವಿಪಿಐಗಳನ್ನು ನೇರವಾಗಿ ಬಿಡುತ್ತಿದ್ದಂತೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಸಿಟ್ಟಾಗಿ ಪೊಲೀಸರ ಮೇಲೆಯೇ ಹರಿಹಾಯ್ದರು. ಗರ್ಭಗುಡಿಯೊಳಗೂ ವಿಐಪಿಗಳೇ ತುಂಬಿದ್ದರು. ಪೊಲೀಸರು ಭಕ್ತರಿಗಿಂತ ವಿಐಪಿಗಳನ್ನು ನಿಯಂತ್ರಿಸಲೇ ಹೆಚ್ಚು ಹರಸಾಹಸಪಟ್ಟರು. ಅಲ್ಲದೆ 2 ಸಾವಿರ ರೂ ಟಿಕೆಟ್ ಪಡೆದುಕೊಂಡು ಬಂದವರ ಸಂಖ್ಯೆಯೂ ಹೆಚ್ಚಾಗಿತ್ತು. ಇದರಿಂದ ನೂಕುನುಗ್ಗಲು ಉಂಟಾಯಿತು.
ನಗರದ ಹಲವೆಡೆ ಪ್ರಸಾದ ವಿತರಣೆ: ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಗ್ರಹಾರ, ಚಾಮುಂಡಿಪುರA, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಒಂಟಿಕೊಪ್ಪಲು. ಕುವೆಂಪುನಗರ, ರಾಮಕೃಷ್ಣನಗರ, ವಿಜಯನಗರ ಸೇರಿದಂತೆ ನಗರದೆಲ್ಲೆಡೆ ವಿತರಣೆ ಮಾಡಲಾಯಿತು. ಸಾರ್ವಜನಿಕರು ಸರತಿ ಸಾಲಿನಲ್ಲಿ ಪ್ರಸಾದ ಸ್ವೀಕರಿಸಿದರು.

ಬಾಕ್ಸ್ ನ್ಯೂಸ್
ಸುತ್ತೂರು ಮಠದಲ್ಲಿ ಪ್ರಸಾದ ವಿತರಣೆ
ಆಷಾಢ ಮಾಸದ ಕಡೆಯ ಶುಕ್ರವಾರದ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಹೋಗುವ ಸಾವಿರಾರು ಭಕ್ತರು ಮಠಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ವತಃ ತಾವೇ ಪ್ರಸಾದ ವಿತರಿಸಿದರು. ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆಯಲ್ಲಿ ಶ್ರೀ ಮಠದಿಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಎಂದು ಆಶಿಸಿದರು. ಬಾಳೆಕಾಯಿ ಕಡಲೆಕಾಳು ಹುಳಿ, ಉಪ್ಪಿಟ್ಟು, ಪೊಂಗಲ್, ಮೈಸೂರು ಪಾಕ್ ವಿತರಿಸಲಾಯಿತು.