Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸೂರ್ಯ-ಚಂದ್ರರಿರುವವರೆಗೂ ಭಾರತ ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ


ಮೈಸೂರು: ಸೂರ್ಯ-ಚಂದ್ರರಿರುವವರೆಗೂ ಭಾರತ ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ. ಯತೀಂದ್ರ ಹೇಳಿದ ತಕ್ಷಣ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ರಾಷ್ಟçಗಳಿವೆ. ಆದರೆ ಹಿಂದೂಗಳಿಗಿರುವುದು ಏಕೈಕ ರಾಷ್ಟç, ಅದು ಭಾರತ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಿಂದೂ ರಾಷ್ಟçವಾಗಲಿದೆ. ಕೋಟ್ಯಂತರ ಜನರು ಈ ಕನಸಿನ ಸಾಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಯತೀಂದ್ರ ಹೇಳಿಕೆಗೆ ತಿರುಗೇಟು ನೀಡಿದರು.
ಮರಳಿ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ, ನನ್ನ ರಕ್ತವೇ ಬಿಜೆಪಿ. ನನ್ನ ರಕ್ತವೇ ಬಿಜೆಪಿ. ನಾನು ಬಿಜೆಪಿಯನ್ನು ಬಿಟ್ಟು ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದರು.
ಪಕ್ಷದ ಹಿರಿಯ ನಾಯಕರು ಹಾಗೂ ಅಧಿಕಾರದಲ್ಲಿ ಇರುವವರು ನನ್ನೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ನಾನು ಬಿಜೆಪಿಗೆ ಸೇರಲು ಯಾವುದೇ ಷರತ್ತುಗಳನ್ನು ಹಾಕಿಲ್ಲ. ಆದರೆ ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಬದಲಾವಣೆಗಳ ಬೇಡಿಕೆ ಇಟ್ಟಿದ್ದೇನೆ. ಬೇಡಿಕೆ ಎಂದರೆ ಅದು ಷರತ್ತಲ್ಲ ಎಂದರು.
ರಾಜ್ಯದ ಜಿಲ್ಲೆ-ಜಿಲ್ಲೆಗಳಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿದ ಹಿರಿಯ ಕಾರ್ಯಕರ್ತರಿಗೆ ಪ್ರಸ್ತುತ ಪಕ್ಷದ ಸ್ಥಿತಿ ನೋಡಿ ಬೇಸರವಾಗಿದೆ. ಇದನ್ನು ಸರಿಪಡಿಸಬೇಕಿದೆ ಎಂದು ತಿಳಿಸಿದರು.