Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

8 ನೂತನ ಆಂಬ್ಯುಲೆನ್ಸ್ ಗಳಿಗೆ ಸಚಿವರಿಂದ ಚಾಲನೆ


ಮೈಸೂರು; ಆಂಬ್ಯುಲೆನ್ಸ್ ವಾಹನಗಳ ಸೇವೆಯನ್ನು ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೂತನವಾಗಿ ಖರೀದಿಸಲಾಗಿರುವ 8 ಆಂಬ್ಯುಲೆನ್ಸ್ ಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.
ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಅತ್ಯವಶ್ಯಕ ವಾಗಿದೆ ಎಂದರು.
ಈ ವೇಳೆ ಕೆ.ಆರ್. ನಗರದ ಶಾಸಕ ರವಿಶಂಕರ್, ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ ಜಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.