Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳಿ: ಡಾ. ತ್ರಿಣೇಶ್

ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದು ಸ್ಪರ್ದಾತ್ಮಕ ಜಗತ್ತಿನಲ್ಲಿ ಉಳಿಯಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪಾಂಡವಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ತ್ರಿಣೇಶ್ ತಿಳಿಸಿದರು.

ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಿಕೊಳ್ಳಬೇಕು. ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಹೇಳಿದರು 

ಕಾಲೇಜು ಆಡಳಿತ ಅಧಿಕಾರಿ ಹೆಚ್.ಎನ್. ಸುಧಾಕರ್ ಮಾತನಾಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಪೂಜ್ಯ ಶ್ರೀಗಳವರು ಒದಗಿಸಿಕೊಟ್ಟಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಜೊತೆಗೆ ವ್ಯಕ್ತಿತ್ವ ವಿಕಸನ ರೂಪಿಸಲು ಕ್ರೀಡೆ ಎನ್ಎಸ್ಎಸ್ ಅಂತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಸಮಾಜಮುಖಿಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. 

 ಈ ಸಂದರ್ಭದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ದಿನೇಶ್, ಎಸ್.ಕೆ.ಎಸ್.ಟಿ. ಬಾಲಕಿಯರ ಸರ್ಕಾರಿ ಪದವಿಪೂರ್ವಕಾಲೇಜಿನ ಪ್ರಾಂಶುಪಾಲ ರಾಜಣ್ಣ, ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವೆಂಕಟೇಶ್, ಬಿಜಿಎಸ್ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರವೀಣ್ .ಕೆ.ಆರ್, ಪದವಿ ಪೂರ್ವಕಾಲೇಜು ಪ್ರಾಂಶುಪಾಲ ಬಿ. ವೈ. ಕಿರಣ್, ಪ್ರಜಾನುಡಿ ಪತ್ರಿಕೆ ವರದಿಗಾರ ಕೆ ಪಿ ವೆಂಕಟೇಶ, ಮುಖ್ಯ ಶಿಕ್ಷಕಿ ದಿವ್ಯ, ಉಪನ್ಯಾಸಕರಾದ ಶ್ರುತಿ, ಮಹದೇವ್,ಅನಿತಾ, ವರ್ಷಿಣಿ, ಅನುಷಾ, ರಾಕೇಶ್, ಮಂಜುನಾಥ್ ಮತ್ತು ಬೋಧಕ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.