Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಪರಿಚಿತ ವಾಹನದ ಹಿಟ್ ಅಂಡ್ ರನ್‌ಗೆ ಇಬ್ಬರು ಸಾವು


ಹನೂರು ;
ಅಪರಿಚಿತ ವಾಹನದ ಹಿಟ್ ಅಂಡ್ ರನ್‌ಗೆ ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಮತ್ತು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಎ ಕೋಡಹಳ್ಳಿ ಗ್ರಾಮದ ಶಶಾಂಕ್ (25) ಮೃತಪಟ್ಟವರು. ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಕೊನೆಯುಸಿರೆಳೆದಿದ್ದಾರೆ.
ಸುದ್ದಿ ತಿಳಿದ ತಕ್ಷಣ ರಾಮಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಅಪಘಾತ ಎಸಗಿ ಪರಾರಿಯಾಗಿರುವ ವಾಹನ ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ.