Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಪರಾಧದ ಹಿಂದೆ ಅರ್ಥ ಶಾಸ್ತ್ರದ ಲೆಕ್ಕಾಚಾರ; ಪ್ರೊ. ಸೌಮ್ಯ ಕೆ.


ಮೈಸೂರು; ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥ ಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ‘ಅಪರಾಧ ಮತ್ತು ಶಿಕ್ಷೆಯ ಅರ್ಥಶಾಸ್ತ್ರ ಎಂಬ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಹಾಜನ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸೌಮ್ಯ ಕೆ. ಅವರು ‘ಅಪರಾಧ ಮತ್ತು ಶಿಕ್ಷೆಗೆ ಸಂಬAಧಿಸಿದ ಅರ್ಥಶಾಸ್ತç’ ಈ ವಿಷಯವನ್ನು ಕುರಿತು ಮಾತನಾಡಿ, ಅಪರಾಧಿಗಳ ನಡವಳಿಕೆ, ಕಾನೂನು ಜಾರಿ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಆರ್ಥಿಕ ದೃಷ್ಟಿಕೋನದಿಂದ ವಿಶ್ಲೇಷಿಸಿದರು. ಭಾರತದ ಸನ್ನಿವೇಶದಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಪರಾಧಗಳು ಮತ್ತು ಅವುಗಳಿಗೆ ಸಂಬAಧಪಟ್ಟ ಸಿದ್ಧಾಂತದ ಬಗ್ಗೆ ವಿವರಣೆ ನೀಡಿದರು. ಇಂಡಿಯನ್ ಪೀನಲ್ ಕೋಡ್ ಮತ್ತು ಭಾರತ ನ್ಯಾಯ ಸಂಹಿತೆ ಈ ಎರಡರ ನಡುವೆ ಇರುವ ಮೂಲಭೂತ ವ್ಯತ್ಯಾಸಗಳನ್ನು ವಿವರಿಸಿದರು.
ದಂಡ ಮತ್ತು ಜೈಲು ವಾಸದ ಬಗ್ಗೆ ವಿಶೇಷ ಮಾಹಿತಿಯನ್ನು ನೀಡಿ, ದಿನೇ ದಿನೇ ಅಪರಾಧಗಳು ಮತ್ತು ಅಪರಾಧ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಜೈಲುಗಳಲ್ಲಿ ನಿರ್ದಿಷ್ಟ ಸಂಖ್ಯೆಗಿAತ ಹೆಚ್ಚು ಅಪರಾಧಿಗಳು ಇದ್ದು, ಅದಕ್ಕೆ ಅನುಗುಣವಾಗಿ ನಿರ್ವಹಣಾ ವೆಚ್ಚವು ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅಪರಾಧಗಳ ವಿಧಗಳು ಅದಕ್ಕೆ ಸಂಬAಧಿಸಿದ ಕಾನೂನು, ಶಿಕ್ಷೆ ಮತ್ತು ಸೆಕ್ಷನ್‌ಗಳ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ನೀಡಿದರು. ಒಟ್ಟಾರೆ, ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರ ಮತ್ತು ಕಾನೂನು ಕ್ಷೇತ್ರಗಳ ನಡುವಿನ ಸಂಬAಧವನ್ನು ತಿಳಿದುಕೊಳ್ಳಲು ಮತ್ತು ಅಪರಾಧದಿಂದ ಉಂಟಾಗುವ ಆರ್ಥಿಕ ಪರಿಣಾಮಗಳು, ಅಪರಾಧ ನಿಯಂತ್ರಣದ ಅಗತ್ಯತೆ ಹಾಗೂ ಶಿಕ್ಷೆಯ ವ್ಯವಸ್ಥೆಯ ಆರ್ಥಿಕ ಅಂಶಗಳನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯಕವಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಆರ್. ಜಯಕುಮಾರಿ ವಹಿಸಿದ್ದರು. ಅರ್ಥಶಾಸ್ತç ವಿಭಾಗದ ಮುಖ್ಯಸ್ಥೆ ವೆಂಕಟಲಕ್ಷಿö್ಮಎA.ಎನ್, ಸಹಾಯಕ ಪ್ರಾಧ್ಯಾಪಕರಾದ ಡಾ.ಪುಷ್ಪರಾಣಿ ಪಿ.ಜಿ. ಉಪಸ್ಥಿತರಿದ್ದರು.
ಅರ್ಥಶಾಸ್ತçದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂವಾದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.