
ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ಕಾರ್ಯದರ್ಶಿ ಡಾ. ಈ. ಸಿ. ನಿಂಗರಾಜ್ ಗೌಡ ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮೈಸೂರಿನ ಹೆಬ್ಬಾಳದ ಹತ್ತೀರ ಇರುವ ಕೆಬಿಲ್ ಸಿಲಿಕಾನ್ ಸಿಟಿ ಬಡಾವಣೆಯ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮೈಸೂರು ಲಯನ್ ಗಾರ್ಡನ್ ಸಿಟಿ ಸಂಸ್ಥೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು , ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮವಾಗದೆ, ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಭಾಗವಾಗಬೇಕು ಎಂದು ತಿಳಿಸಿದರು.
ಮರಗಳು ಮಾನವಕುಲಕ್ಕೆ ಶುದ್ಧ ಗಾಳಿ, ನೆರಳು ಹಾಗೂ ಪರಿಸರ ಸಮತೋಲನವನ್ನು ನೀಡುತ್ತವೆ. ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಾಂಕ್ರೀಟ್ ನಿರ್ಮಾಣದಿಂದ, ಹಸಿರು ಪ್ರದೇಶಗಳು ಕಡಿಮೆಯಾಗುತ್ತಿದ್ದು, ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆ, ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು, ಅವುಗಳ ಪಾಲನೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. “ಒಬ್ಬ ವ್ಯಕ್ತಿ-ಒಂದು ಗಿಡ” ಎಂಬ ಸಂಕಲ್ಪದೊAದಿಗೆ ಹಸಿರು ಮೈಸೂರಿನ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವಿ.ಪಿ.ಲಕ್ಷಿ÷್ಮನಾರಾಯಣ್ , ಆಡಳಿತಧಿಕಾರಿ ಸಿ.ಡಿ. ಕೃಷ್ಣ, ಉಪಾಧ್ಯಕ್ಷ ಎನ್. ಶಂಕರ್ , ನಿತೀನ್ ಕುಮರ್ , ರಾಜು, ದಿನೇಶ್ ಮತ್ತು ಪದಾಧಿಕಾರಿಗಳು, ಸದಸ್ಯರು ಹಾಗೂ ಪರಿಸರಾಸಕ್ತರು ಉಪಸ್ಥಿತರಿದ್ದರು.