
ಮೈಸೂರು: ರಾಜ್ಯದಲ್ಲಿ ನನ್ನನ್ನೂ ಒಳಗೊಂಡು ನಾಲ್ವರು ಅಲ್ಪಸಂಖ್ಯಾತ ನಾಯಕರಿಗೆ ‘ಕಾಂಗ್ರೆಸ್ ಪಕ್ಷವು ಸದ್ಯ ಸಚಿವರಾಗುವ ಅವಕಾಶವನ್ನು ನೀಡಿದೆ. ಮುಂದೆ ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೂ ಖಂಡಿತ ಅವಕಾಶ ಸಿಗಲಿದೆ’ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ಶಾಸಕ ತನ್ವೀರ್ ಸೇಠ್ಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಮಂಗಳವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ತನ್ವೀರ್ ಸೇಠ್ ಅವರು ಖಂಡಿತ ಸಚಿವ ಸ್ಥಾನಕ್ಕೆ ಅರ್ಹರಿದ್ದಾರೆ. ಭವಿಷ್ಯದಲ್ಲಿ ಅವರಿಗೆ ಪಕ್ಷವು ಸೂಕ್ತ ಸ್ಥಾನಮಾನ ನೀಡಲಿದೆ’ ಎಂದರು.
ಕಾAಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ತಮಗೆ ಒಲಿದು ಬಂದ ಪ್ರಧಾನಿ ಹುದ್ದೆಯನ್ನೇ ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಮೈಸೂರಿನವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ್ದಾರೆ. ಇವರೆಲ್ಲ ನಮಗೆ ಮಾದರಿ’ ಎಂದು ಮಾರ್ಮಿಕವಾಗಿ ಹೇಳಿದರು.