Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಮಿಳು ನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ


ಮೈಸೂರು; ತಮಿಳುನಾಡಿಗೆ ನಿತ್ಯವೂ 12 ಸಾವಿರ ಕ್ಯೂಸೆಕ್ ನೀರು ಹರಿಸುವುದನ್ನು ವಿರೋಧಿಸಿ ನಗರದಲ್ಲಿ ಬುಧವಾರ ಕಾವೇರಿ ಕ್ರಿಯಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ನಗರದ ದೊಡ್ಡ ಗಡಿಯಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ರಸ್ತೆ ತಡೆದು ನಡೆಯಿಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ
ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಎಸ್. ಜಯಪ್ರಕಾಶ್ (ಜೆಪಿ) ರಾಜ್ಯದಲ್ಲಿ ಮಳೆಯಿಲ್ಲದೆ, ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಕುಡಿಯುವ ನೀರು, ಕೃಷಿಗೆ ನಮಗೆ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪದೇ ಪದೇ ತಮಿಳುನಾಡಿಗೆ ನೀರು ಬಿಡುವಂತೆ ಅವ್ಶೆಜ್ಞಾನಿಕವಾಗಿ ಆದೇಶಿಸುತ್ತಿದೆ. ಈ ಪ್ರಾಧಿಕಾರಕ್ಕೆ ಸಂವಿಧಾನದ ಮಾನ್ಯತೆಯಿಲ್ಲ. ಹಾಗಾಗಿ ಕೂಡಲೇ ಈ ಪ್ರಾಧಿಕಾರವನ್ನೇ ರದ್ದು ಗೊಳಿಸಬೇಕೆಂದು ಆಗ್ರಹಿಸಿದರು. ಪ್ರಾಧಿಕಾರದಿಂದ ರಾಜ್ಯದ ಪಾಲಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಪ್ರಾಧಿಕಾರದಿಂದ ರಾಜ್ಯಕ್ಕೆ ಯಾವಾಗಲು ಅನುಕೂಲವಾಗಿಲ್ಲ. ಅಲ್ಲದೇ ಪ್ರಾಧಿಕಾರ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನೀರಿನ ವಿಚಾರವಾಗಿ ಪದೇ ಪದೇ ಜಗಳ ತಂದು ಹಾಕುವ ಕೆಲಸವನ್ನು ಮಾಡುತ್ತಿದೆ. ಇದರಿಂದಾಗಿ ಎರಡು ರಾಜ್ಯಗಳಲ್ಲಿ ಅಶಾಂತಿಯ ವಾತಾವರಣವುಂಟಾಗುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರಿಂಕೋರ್ಟ್ ನೀರು ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ರದ್ದು ಮಾಡಬೇಕು. ಉಭಯ ರಾಜ್ಯಗಳಲ್ಲಿನ ಜನರಲ್ಲಿ ಶಾಂತಿ ಕಾಪಾಡಲು ಸಂಕಷ್ಟ ಸೂತ್ರವನ್ನು ಕೂಡಲೇ ರಚಿಸಬೇಕು. ಅಲ್ಲಿಯ ತನಕ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಬಿಟ್ಟರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತೇಜೇಶ್ ಲೋಕೇಶ್ ಗೌಡ, ಮೆಲ್ಲಹಳ್ಳಿ ಮಹದೇವಸ್ವಾಮಿ, ಮೂಗೂರು ನಂಜುAಡಸ್ವಾಮಿ, ಸುರೇಶ್ ಗೌಡ, ಕೆಬಿ ಲಿಂಗರಾಜು, ಸೋಮೇಗೌಡ, ಸಿಂದುವಳ್ಳಿ ಶಿವಕುಮಾರ್, ಸಂತೋಷ್, ಪ್ರಭುಶಂಕರ, ಹನುಮಂತಯ್ಯ, ಬಾಲಿ, , ಶ್ರೀನಿವಾಸ, ಕೃಷ್ಣಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.