
ಮೈಸೂರು: ಒಂದು ಉತ್ತಮ ಪುಸ್ತಕ ನೂರು ಗೆಳೆಯರಿಗೆ ಸಮಾನ, ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಎಂ. ಹೇಳಿದರು.
ಬುಧವಾರ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನಗಳಲ್ಲಿ ಜನರು ತುಂಬಿರುವAತೆ ಲೈಬ್ರರಿಗಳಲ್ಲೂ ಓದುಗರು ತುಂಬಿರಬೇಕು ಎಂದರು.
ರಾಖಿ ಚೆನ್ನಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಕೃತಕ ಬುದ್ಧಿಮತ್ತೆಯನ್ನೇ ನೆಚ್ಚಿಕೊಳ್ಳದೆ ಪುಸ್ತಕಗಳ ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಓದು ಮನುಷ್ಯನನ್ನು ಪರಿಪೂರ್ಣರನ್ನಾಗಿ, ಬರಹ ಅವನನ್ನು ನಿಖರವಾಗಿಸುತ್ತದೆ ಹಾಗೂ ಮಾತು ಅವನನ್ನು ಸಿದ್ಧಗೊಳಿಸುತ್ತದೆ ಎಂದು ಕಿವಿಮಾತು ಹೇಳಿದರು. ಶಾರದ ವಿಲಾಸ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಜಿ. ಆನಂದ್ ಮಾತನಾಡಿ, ಪುಸ್ತಕಗಳು ವ್ಯಕ್ತಿಯನ್ನು ಸುಸಂಸ್ಕೃತ ನಾಗರಿಕನನ್ನಾಗಿ ಬದಲಾಯಿಸುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ವಿದ್ಯಾರ್ಥಿನಿಯರ ಪ್ರೌಢಶಾಲೆ ಪೀಪಲ್ ಪಾರ್ಕ್ನ ಉಪ ಪ್ರಾಂಶುಪಾಲ ಡಾ. ಬಿ. ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ನಾನು ನನ್ನ ಜೀವನದಲ್ಲಿ ಗ್ರಂಥಾಲಯದ ನಂಟಿಲ್ಲದೆ ಕಷ್ಟಪಟ್ಟಿದ್ದೇನೆ, ಆದ್ದರಿಂದ ವಿದ್ಯಾರ್ಥಿಗಳು ನಿರಂತರವಾಗಿ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಪತ್ರಿಕೋದ್ಯಮ ಹಾಗೂ ಗ್ರಂಥಾಲಯಗಳ ನಡುವಿನ ಅವಿನಾಭಾವ ಸಂಬAಧ ಮತ್ತು ಗ್ರಂಥಾಲಯಗಳ ಪರಿಣಾಮಕಾರಿ ಬಳಕೆಯ ಕುರಿತು ವಿವರಣೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕÀ ಮಂಜುನಾಥ್ ಬಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಸುಮ ಬಿ. ಕೋಡಿಹಳ್ಳಿ, ಮುಖ್ಯ ಗ್ರಂಥಾಲಯಾಧಿಕಾರಿ ಪದ್ಮಶ್ರೀ ಟಿ., ಪೀಪಲ್ಸ್ ಪಾರ್ಕ್ ಗ್ರಂಥಾಲಯದ ಸಹಾಯಕ ಗ್ರಂಥಪಾಲಕಿ ಸೌಮ್ಯ ಎಸ್., ನಗರ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಸೈಯದ ನೂರುಸ್ಸಭಾ ಸಾಲಾರ್, ಕಚೇರಿ ಅಧೀಕ್ಷಕಿ ಲತಾ ಹೆಚ್., ಪ್ರಥಮ ದರ್ಜೆ ಸಹಾಯಕಿ ಶೋಭ ಎಲ್. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.