Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರ ಪೊಲೀಸ್ ಆಯುಕ್ತರಿಂದ ಚಾಮುಂಡಿ ಬೆಟ್ಟದ ಮೇಲೆ ಭಕ್ತ ಸೇವೆ


ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಸ್ವತಃ ನಿಂತು ಭಕ್ತರಿಗೆ ಅನ್ನದಾನ ಮಾಡುವ ಮೂಲಕ ಸೇವಾ ಕಾರ್ಯ ನಡೆಸಿದರು.
ನಾಡ ಶಕ್ತಿ ದೇವತೆಯಾದ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಬಂದಿದ್ದ ಸಾವಿರಾರು ಭಕ್ತರಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಯಾವುದೇ ವಿಐಪಿ ವ್ಯವಸ್ಥೆ ಇಲ್ಲದೆ, ಸಾಮಾನ್ಯರಂತೆ ಸಾಲಿನಲ್ಲಿ ನಿಂತು ತಮ್ಮ ಕೈಯಾರೆ ಅನ್ನ, ಸಾಂಬಾರ್ ಮತ್ತು ಪ್ರಸಾದವನ್ನು ವಿತರಿಸಿದರು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ವಿಶೇಷ ಆದ್ಯತೆ ನೀಡಲಾಯಿತು.
ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಕೂಡ ಆಯುಕ್ತರ ಜೊತೆಗೂಡಿ ಪ್ರಸಾದ ವಿತರಣೆಯಲ್ಲಿ ಸಹಕರಿಸಿದರು. ಭಕ್ತರಿಗೆ ಯಾವುದೇ ತೊಂದರೆಯಾಗದAತೆ ಶಿಸ್ತುಬದ್ಧವಾಗಿ ವ್ಯವಸ್ಥೆ ಮಾಡಲಾಗಿತ್ತು.
“ಪೊಲೀಸ್ ಎಂದರೆ ಕೇವಲ ಕಾನೂನು ಸುವ್ಯವಸ್ಥೆ ಮಾತ್ರವಲ್ಲ, ಜನರೊಂದಿಗೆ ಬೆರೆತು ಸೇವೆ ಮಾಡುವುದೂ ನಮ್ಮ ಕರ್ತವ್ಯ” ಎಂಬ ಸಂದೇಶವನ್ನು ಈ ಮೂಲಕ ಆಯುಕ್ತರು ನೀಡಿದರು.
ಈ ಸೇವಾ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೂಡ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.