Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ದರ್ಶನಕ್ಕಾಗಿ ಹರಿದು ಬಂದ ಭಕ್ತ ಸಾಗರ


ಹನೂರು; ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾಭಾಗದಿಂದ ಭಕ್ತಸಾಗರವೇ ಹರಿದು ಬಂದಿತು.
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ದೇವಸ್ಥಾನವನ್ನು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ತಮಿಳುನಾಡಿನ ಹೊಸೂರು ಮೂಲದ ಭಕ್ತ ರೋಸ್ ರಮೇಶ್ ಎಂಬವರು 15 ಲಕ್ಷ ರೂ. ವೆಚ್ಚದಲ್ಲಿ 1 ಲಾರಿ ಹೂವುಗಳಿಂದ ಪುಷ್ಪಲಂಕಾರ ಮಾಡಿಸಿದ್ದು, ಗರ್ಭಗುಡಿ, ರಾಜಗೋಪುರ, ದೇವಾಲಯದ ಹೊರಾಂಗಣ, ರುದ್ರಾಕ್ಷಿ ಮಂಟಪ, ಬಸವ ವಾಹನ ಹಾಗೂ ರಥೋತ್ಸವ ಮಾರ್ಗವನ್ನು ಲಿಲಿಯಂ, ಆರ್ಕಿಡ್, ಕಾರ್ನೇಷನ್, ಜರ್ಬೆರಾ, ಡೈಸಿ, 5 ಬಗೆಯ ಗುಲಾಬಿಗಳು ಸೇರಿದಂತೆ ಒಟ್ಟು 20 ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ.
ಭೀಮನ ಅಮಾವಾಸ್ಯೆ ನಿಮಿತ್ತ ಇಂದು ಸರದಿ ಬೇಡಗಂಪಣ ಅರ್ಚಕರು ಸಾಂಪ್ರಾದಾಯಿಕ ವಿಶೇಷ ಪೂಜೆ ಸಲ್ಲಿಸಿ ಮಹದೇಶ್ವರನ ಲಿಂಗಕ್ಕೆ ಮಹಾ ಮಜ್ಜನ ನೆರವೇರಿಸಿ ಗಂಧಾಭಿಷೇಕ, ಬಿಲ್ವಾರ್ಚನೆ, ಕುಂಕುಮಾರ್ಚನೆ ಮಾಡಲಾಯಿತು.
ಭೀಮನ ಅಮಾವಾಸ್ಯೆ ಅಊಂಒAಖAಎAಓAಉAಖ ಅಮಾವಾಸ್ಯೆ 2026 ಮಲೆ ಮಹದೇಶ್ವರ ಬೆಟ್ಟ
ದೇವಾಲಯದಲ್ಲಿ ಜನಸಾಗರ;
ರಾಜ್ಯದ ನಾನಾ ಭಾಗದಿಂದ ಬಂದ ಭಕ್ತರು, ಸರತಿ ಸಾಲಿನಲ್ಲಿ ನಿಂತು ಮಾದಪ್ಪನನ್ನು ಕಣ್ತುಂಬಿಕೊAಡು ಉಘೇ ಉಘೇ ಮಾದಪ್ಪ ಘೋಷವಾಕ್ಯ ಮೊಳಗಿಸಿದರು. ದೂಪ ದೀಪ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಹರಕೆ ಕಟ್ಟಿಕೊಂಡ ಭಕ್ತರು ಮುಡಿಸೇವೆ ನೀಡಿದ್ದು ಕಂಡಿಬAದಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಭೀಮನ ಅಮಾವಾಸ್ಯೆ ಪೂಜೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಯಾಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಭಕ್ತಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಲಾಗಿದ್ದು ಭಕ್ತಾದಿಗಳಿಗೆ ವಿಶೇಷ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.