
ಉತ್ತಮ ರಾಷ್ಟ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದು
ಮೈಸೂರು; ಉತ್ತಮ ರಾಷ್ಟç ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಬೃಂದಾ ಹೇಳಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು,
ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಮೈಸೂರು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇವರ ಸಹಯೋಗದೊಂದಿಗೆ ಬುಧವಾರ ನಗರದ ಚಾಮರಾಜೇಂದ್ರ ದೃಶ್ಯಕಲ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ಯಾವುದೇ ಹೆಚ್‌ಐವಿ ಏಡ್ಸ್ ಕಾಯಿಲೆಯಂತಹ ಸೋಂಕುಗಳಿಗೆ ಒಳಗಾಗದೆ ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು, ಏಡ್ಸ್ ಮುಕ್ತ ರಾಷ್ಟçವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಮುನಿಂದ್ರಮ ಮಾತನಾಡಿ, ದೇಶದಲ್ಲಿ ಹಲವಾರು ರಾಜ್ಯಗಳು ಎಚ್‌ಐವಿ ಸೋಂಕಿತರನ್ನು ಅತಿ ಹೆಚ್ಚು ಹೊಂದಿದ್ದು, ಅದರಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಭಾರ ಆಡಳಿತಾಧಿಕಾರಿ ಜಯಶಂಕರ್ ಮಾತನಾಡಿ, ಯಾವುದೇ ಮಾಹಿತಿಯನ್ನು ನಾವು ಅಷ್ಟೇ ತಿಳಿದುಕೊಂಡರೆ ಸಾಲದು, ನಿಮಗೆ ಗೊತ್ತಿರುವ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ತಿಳಿಸಿ, ಏಡ್ಸ್ ಮುಕ್ತ ರಾಜ್ಯವನ್ನಾಗಿ ಕರ್ನಾಟಕ ರಾಜ್ಯವನ್ನು ಮಾಡೋಣ ಎಂದು ತಿಳಿಸಿದರು. ಖಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ಈಗಾಗಲೇ ಸೋಂಕಿತರದವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಚಾಮರಾಜೇಂದ್ರ ಕಾಲೇಜಿ ಶೈಕ್ಷಣಿಕ ಸಂಯೋಜಕ ಚಂದ್ರಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಸವಿತಾ, ಆಪ್ತಸಮಾಲೋಚಕರಾದ ರಜನಿ ಶಂಕರ್, ಅಂದಾನಿ, ಬಲರಾಮ್, ಪ್ರದೀಪ್ ಮತ್ತು ಕಾಲೇಜಿನ ಕಾರ್ಯದರ್ಶಿ ಸುಮಂತ್ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಹಾಜರಿದ್ದವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು..