
ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬುಧವಾರ ನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಪ್ರತಿಭಟನೆ ನಡೆಸಿದರು.
ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ, ಕೆಲಕಾಲ ತಮಿಳುನಾಡು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿತ್ಯವೂ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅನ್ಯಾಯದಿಂದ ಕೂಡಿದೆ ಎಂದು ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿದರು. ಪ್ರತಿಭಟನಾ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ನಮ್ಮ ಕೆರೆಕಟ್ಟೆಗಳು ಜಾನುವಾರುಗಳಿಗೆ ನೀರಿಲ್ಲ. ಈ ಬಾರಿ ಮುಂಗಾರು ಮಳೆ ಕೊಟ್ಟಿದೆ. ನಮಗೆ ನೀರಿಲ್ಲದ ಸಮಯದಲ್ಲಿ ಅವರಿಗೆ ನೀರು ಬಿಡೋದು ಅನ್ಯಾಯ. ಸರ್ವ ಪಕ್ಷಗಳ ಸಭೆಯ ನಿರ್ಣಯದಂತೆ ನೀರು ಬಿಡಬಾರದು ಎಂದು ಆಗ್ರಹಿಸಿದರು.
ಅಲ್ಲದೆ ಅಧಿಕಾರಿಗಳ ಕಚೇರಿಗೆ ಬೀಗ ಹಾಕಲು ಪ್ರತಿಭಟನಾನಿರತ ರೈತರು ಯತ್ನಿಸಿದಾಗ, ತಡೆದ ಪೊಲೀಸರು ಹಾಗೂ ರೈತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್ ಸ್ಭೆರಿದಂತೆ ಹಲವು ಮಂದಿ ರೈತ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.