
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶಾದ್ಯಂತ ನಡೆಯುತ್ತಿರುವಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಗಳಾದ ಡಾ. ಈ.ಸಿ. ನಿಂಗರಾಜ್ ಗೌಡ ಅವರು ತಮ್ಮ ನಿವಾಸದಲ್ಲಿ ರಾಷ್ಟçಧ್ವಜ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿ ಹಾಗೂ ರಾಷ್ಟಾçಭಿಮಾನದ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, `ತ್ಯಾಗ, ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ತ್ರಿವರ್ಣ ಧ್ವಜ ಹಾಗೂವಂದೇ ಮಾತರಂ’ ಘೋಷಣೆ, ದೇಶಕ್ಕಾಗಿ ಸಾವಿರಾರು ದೇಶಭಕ್ತರು ತಮ್ಮ ಜೀವನವನ್ನು ತ್ಯಾಗ ಮಾಡಲು ಹಾಗೂ ಕೋಟ್ಯಂತರ ಜನರು ಉತ್ತಮ ಭಾರತ ನಿರ್ಮಾಣಕ್ಕಾಗಿ ಶ್ರಮಿಸಲು ಪ್ರೇರಣೆ ನೀಡಿವೆ” ಎಂದರು.
ಪ್ರಧಾನಮAತ್ರಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ' ಕರೆ ದೇಶದ ಪ್ರತಿಯೊಬ್ಬ ನಾಗರಿಕನಲ್ಲೂ ರಾಷ್ಟçಭಕ್ತಿ ಮತ್ತು ದೇಶದ ಅಭಿವೃದ್ಧಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ.ವಿಕಸಿತ ಭಾರತ’ ನಿರ್ಮಾಣದ ಗುರಿಯೊಂದಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಬೇಕು ಎಂದು ಕರೆ ನೀಡಿದರು.
ರಾಷ್ಟçಧ್ವಜದ ಗೌರವವನ್ನು ಕಾಪಾಡುವುದರ ಜೊತೆಗೆ ದೇಶದ ಏಕತೆ, ಅಖಂಡತೆ, ಶಾಂತಿ ಮತ್ತು ಸಮೃದ್ಧಿಗಾಗಿ ಎಲ್ಲರೂ ಸಂಕಲ್ಪ ತೊಡಬೇಕು ಎಂದು ತಿಳಿಸಿದರು.