Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಗರದಲ್ಲಿ ವಿವಿಧ ಸಂಘ, ಸಂಸ್ಥೆಗಳಿ0ದ ಪ್ರತಿಭಟನೆ

  • ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವಷ್ಟೇ ; ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
  • ಪೊರಕೆ ಚಳುವಳಿ, ನಿದ್ರಿಸುವ ಮೂಲಕ ವಿಡಂಬನೆಯ ಪ್ರತಿಭಟನೆ
    ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ, ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಅರಮನೆ ನಗರಿ ಮೈಸೂರಲ್ಲಿ ನೈತಿಕ ಬೆಂಬಲ ಮಾತ್ರ ವ್ಯಕ್ತವಾಯಿತು. ಹಾಗಾಗಿ ಜನ ಜೀವನ ಎಂದಿನAತೆ ಸಹಜ ಸ್ಥಿತಿಯಲ್ಲಿತ್ತು. ಸಾರಿಗೆ ವ್ಯವಸ್ಥೆ ಯಥಾಸ್ಥಿತಿಯಲ್ಲಿತ್ತು. ಯಾವುದೇ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿರಲಿಲ್ಲ. ಪ್ರತಿಭಟನೆ ನಡೆಸಿದ ಸ್ಥಳಗಳಲ್ಲಿ ಕೆಲವು ಗಂಟೆಗಳು ಮಾತ್ರ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.
    ಆದರೆ ವಿವಿಧ ಸಂಘ, ಸಂಸ್ಥೆಗಳು ನಗರದ ವಿವಿಧೆಡೆ ಪ್ರತಿಭಟನೆಗಳನ್ನು ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದವು.
    ನಗರದ ಕಾಡಾ ಕಚೇರಿ ಆವರಣದಲ್ಲಿ ಖಾಲಿ ಕೊಡ ಪ್ರದರ್ಶಿಸಿದ ಕಬಿನಿ ರೈತ ಹಿತರಕ್ಷಣಾ ಸಮಿತಿಯ ಸದಸ್ಯರು, ಬಾರುಕೋಲು ಬೀಸಿ ಘೋಷಣೆಗಳನ್ನು ಕೂಗುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    ಮತ್ತೊಂದೆಡೆ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದವರು ತಮಿಳುನಾಡು ರಾಜಕೀಯ ಮುಖಂಡರ ವ್ಯಂಗ್ಯಚಿತ್ರಗಳಿಗೆ ಪೊರಕೆಯಲ್ಲಿ ಹೊಡೆಯುವ ಚಳವಳಿ ನಡೆಸಿದರು. ಕನ್ನಡ ಸೇನೆ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು.
    ಹಾರ್ಡಿಂಜ್ ವೃತ್ತದಲ್ಲಿ ಕರ್ನಾಟಕ ಕಾವಲು ಪಡೆ, ರೈತ ಸಂಘ, ಮೈಸೂರು ಕನ್ನಡ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯ ಸದಸ್ಯರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
    ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದರು. ಗೇಟ್ ತಳ್ಳಿ ನುಗ್ಗಲು ಮುಂದಾದಾಗ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಚೀಫ್ ಇಂಜಿನಿಯರ್ ಬಂದು ಕಾಲುವೆಗೆ ನೀರು ಬಿಡುತ್ತೇವೆ ಎಂದು ಹೇಳುವವರೆಗೂ ನಾವು ಹೋಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ತಡೆ ನಡೆಸಿದವರ ಬಂಧನ;
ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕರ್ನಾಟಕ ಸೇನಾ ಪಡೆಯ ಮುಖಂಡರು, ಕಾರ್ಯಕರ್ತರು, ಕೆಲಕಾಲ ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆ ಕೂಗುತ್ತಾ ಬೆಂಗಳೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆಯಲು ಯತ್ನಿಸಿದರು. ರಸ್ತೆಗೆ ಅಡ್ಡಲಾಗಿ ಕುಳಿತು ಘೋಷಣೆ ಕೂಗಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಸಿಎಆರ್ ಮೈದಾನಕ್ಕೆ ಕರೆದೊಯ್ದರು. ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್‌ಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿದ್ರಿಸುವ ವಿಡಂಬನೆಯ ಚಳವಳಿ ;
ನಗರದ ಹಾರ್ಡಿಂಜ್ ವೃತ್ತದಲ್ಲಿ ರೈತರು ಮತ್ತು ಕನ್ನಡಪರ ಹೋರಾಟಗಾರರು, ಕಾವೇರಿ ನೀರಿನ ವಿಚಾರವಾಗಿ ಸರ್ಕಾರ ನಿದ್ರಿಸುತ್ತಿದೆ ಎಂದು ನಿದ್ರಿಸುವ ವಿಡಂಬನೆಯ ಚಳವಳಿ ನಡೆಸಿದರು. ನಮ್ಮ ರಾಜಕಾರಣಿಗಳು ನಿದ್ರೆಗೆ ಜಾರಿದ್ದಾರೆ. ತಮ್ಮದೇ ಅಧಿಕಾರವಿದ್ದರೂ ಯಾಕೆ ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡುತ್ತಿಲ್ಲ. ಹೋರಾಟಗಳಿಂದ ಸರ್ಕಾರವನ್ನು ಬದಲಿಸಿದ ಉದಾಹರಣೆಗಳಿವೆ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಬಿಡುವುದರಿಂದ ನಮ್ಮ ರೈತರು ಸಂಕಷ್ಟು ಎದುರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಕಾವಲುಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ, ರೈತ ಮುಖಂಡ ಹೊಸಕೋಟೆ ಬಸವರಾಜು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರಾದ ಎಸ್.ಬಾಲಕೃಷ್ಣ, ನಾಲಾಬೀದಿರವಿ, ಗೋಪಿ ಸೇರಿದಂತೆ ಹಲವರು ವಿಡಂಬನೆಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿAದ ಕಾಡಾ ಕಚೇರಿ ಬಳಿ ಪೊರಕೆ ಚಳವಳಿ;
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ, ಮೇಕೇದಾಟು ಯೋಜನೆಗೆ ಕೂಡಲೇ ಅಡಿಗಲ್ಲು ಹಾಕಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿAದ ಕಾಡಾ ಕಚೇರಿ ಬಳಿ ಪೊರಕೆ ಚಳವಳಿ ನಡೆಸಲಾಯಿತು.
ತಮಿಳುನಾಡಿನ ವಿವಿಧ ರಾಜಕೀಯ ಪಕ್ಷದ ಮುಖಂಡರಾದ ಮುಖ್ಯಮಂತ್ರಿ ಜೋಸೆಫ್ ವಿಜಯ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಅಣ್ಣಾ ಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ.ಪಳನಿಸ್ವಾಮಿ, ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಯ ಟಾಗೋರ್ ಅವರ ಭಾವಚಿತ್ರಗಳಿಗೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದೊಂದಿಗೆ ಪದೇ ಪದೇ ಕಾಲು ಕೆರೆದು ಜಗಳವಾಡುವ, ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲೂ÷್ಯಆರ್ಸಿ) ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟೆ್ಗ ಹೋಗುತ್ತಾರೆ. ತಮಿಳುನಾಡಿನ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿರುವ ಸಿಡಬ್ಲೂ÷್ಯಆರ್ಸಿ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಈ ಕೂಡಲೇ ರದ್ದಾಗಬೇಕು. ಈ ತೀರ್ಪು ಕನ್ನಡಿಗರಿಗೆ ಮರಣ ಶಾಸನವಾಗಿದ್ದು, ರಾಷ್ಟಿçÃಯ ಜಲನೀತಿ ಜಾರಿಯಾಗಬೇಕು. ಕಾವೇರಿ ಜಲಾನಯನ ಪ್ರದೇಶದ ಕಾವೇರಿ ಮತ್ತು ಕಪಿಲ ನದಿಯ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ, ಉಪನಾಲೆಗಳಿಗೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಕೆರೆಕಟ್ಟೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಒತ್ತಾಯಕ್ಕೆ ಮಣಿಯದೇ ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವ ನೀರನ್ನು ನಿಲ್ಲಿಸಿ ನಿಮ್ಮ ಮಹತ್ವಾಕಾಂಕ್ಷೆಯ 67 ಟಿಎಂಸಿ ಸಾಮರ್ಥ್ಯ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಮೇಕೇದಾಟು ಯೋಜನೆಗೆ ಈ ಕೂಡಲೇ ಅಡಿಗಲ್ಲು ಹಾಕಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಕರುನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ವೇಣುಗೋಪಾಲ್, ಕನ್ನಡ ಸೇನೆ ಅಧ್ಯಕ್ಷ ಶೈಲಜ್, ಕನ್ನಡ ಕ್ರಾಂತಿಪಡೆ ಕಾರ್ಯಾಧ್ಯಕ್ಷ ಮನೋಜ್ ಕುಮಾರ್, ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷ ಸಿ.ನಾರಾಯಣಗೌಡ, ಕನ್ನಡ ಸೇನೆ ಅಧ್ಯಕ್ಷ ಮಲ್ಲೇಶ್, ತಾಯೂರು ಗಣೇಶ್ ಮೂರ್ತಿ, ಮಧುವನ ಚಂದ್ರು, ಕುಮಾರ್, ರೋಷನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಬಂದ್ ಬೆಂಬಲಿಸಿ ಪ್ರತಿಭಟನೆ ;
ನಗರದ ಹಾರ್ಡಿಂಜ್ ವೃತ್ತದಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆ ವತಿಯಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಜನರಿಗೆ ಕುಡಿಯುವ ನೀರಿಲ್ಲ ಕೆರೆ ನಾಲೆಗಳಿಗೆ ನೀರು ಹರಿಸುವಂತೆ ಅದೇಶ ನೀಡುವ ಕಾವೇರಿ ನಿರ್ವಹಣಾ ಮಂಡಳಿಯ ಏಕಪಕ್ಷೀಯ ತೀರ್ಮಾನ ಖಂಡನೀಯ. ಹೀಗಾಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಅರುಣ್ ಕುಮಾರ್, ರಾಜ್ಯ ಕಾರ್ಯದರ್ಶಿ ಚಾಮರಾಜು ಮಂಡಕಳ್ಳಿ, ಕಾರ್ಯಾಧ್ಯಕ್ಷ ನವೀನ್ ಕುಮಾರ್, ಶ್ರೀಧರ್ ನಾಯಕ್, ಸಂಚಾಲಕ ಮಂಚ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಶಿವಯೋಗಿ, ಮಹಿಳಾ ಅಧ್ಯಕ್ಷೆ ಭಾಗ್ಯಮ್ಮ, ಕೃಷ್ಣ ನಾಯಕ, ನಾರಾಯಣ, ಮೀಸೆ ಮಂಜಣ್ಣ ಮತ್ತಿತರರು ಭಾಗವಹಿಸಿದ್ದರು.