Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹರ್ ಘರ್ ತಿರಂಗಾ ಹಾಗೂ ವಂದೇ ಮಾತರಂನ 150ನೇ ವರ್ಷದ ಸಂಭ್ರಮಾಚರಣೆ


ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ‘ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಹಾಗೂ ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು.
ಎಲ್ಲಾ ಎನ್‌ಸಿಸಿ ಕೆಡೆಟ್‌ಗಳು ಒಟ್ಟಾಗಿ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಮೂಲಕ ದೇಶಭಕ್ತಿ ಹಾಗೂ ರಾಷ್ಟç ಪ್ರೇಮವನ್ನು ಮೆರೆದರು.
ಕಾಲೇಜಿನ ಆವರಣದಲ್ಲಿ ಹರ್ ಘರ್ ತಿರಂಗಾ ರ‍್ಯಾಲಿ ನಡೆಸಲಾಯಿತು. ರ‍್ಯಾಲಿಯ ಮೂಲಕ ದೇಶಭಕ್ತಿ, ರಾಷ್ಟಿçÃಯ ಏಕತೆ ಹಾಗೂ ರಾಷ್ಟಾçಭಿಮಾನದ ಸಂದೇಶವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಶೈಕ್ಷಣಿಕ ಡೀನ್ ಡಾ. ಶ್ರೀಧರ ಹೆಚ್, ಫ್ಲಾಯಿಂಗ್ ಆಫೀಸರ್ ಡಾ. ಪುಷ್ಪರಾಣಿ ಪಿ.ಜಿ., ಲೆಫ್ಟಿನೆಂಟ್ ಗಾಯತ್ರಿ ವಿ , ಎನ್‌ಸಿಸಿ ಕೆಡೆಟ್‌ಗಳು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಭಾಗವಹಿಸಿದ್ದರು.