Day: August 14, 2026
ಎನ್.ಎಸ್.ಎಸ್. ಘಟಕಗಳ ವತಿಯಿಂದ ಸ್ವಚ್ಚತೆ ಮತ್ತು ಗಿಡನೆಡುವ ಅಭಿಯಾನ
ಮೈಸೂರು; ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕಗಳ ವತಿಯಿಂದ 80ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿಯಲ್ಲಿ ಸ್ವಚ್ಛತಾ ಮತ್ತು ಗಿಡನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಡಿ.ಎಸ್. ಪ್ರತಿಮಾ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ರಾ.ಸೇ.ಯೋ. ಸ್ವಯಂ ಸೇವಕ ಸೇವಕಿಯರು ಕಾಲೇಜಿನ ಸುತ್ತಮುತ್ತ ಹಾಗೂ ಜಯಲಕ್ಷಿö್ಮÃಪುರಂ ಪಾರ್ಕ್ ಇನ್ನಿತರ ಕಡೆಗಳಲ್ಲಿ ಸ್ವಚ್ಛತೆಯನ್ನು ಮಾಡಿ ಗಿಡಗಳನ್ನು ನೆಡುವುದರ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು…
ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಅಪಾರವಾದದ್ದು : ನಟರಾಜ
ಪಿರಿಯಾಪಟ್ಟಣ : ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಅಪಾರವಾದದ್ದು ಎಂದು ಬೆಟ್ಟದಪುರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಟರಾಜ ಬಿ ಆರ್ ತಿಳಿಸಿದರು. ಬೆಟ್ಟದಪುರದ ಎಸ್ ಎಂ ಎಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಪ್ರಾಮಾಣಿಕತೆ ಪ್ರಯತ್ನ ಹಾಗೂ ಪರಿಶ್ರಮಗಳು ಅತ್ಯುತ್ತಮ ವ್ಯಕ್ತಿತ್ವದ ಲಕ್ಷಣಗಳಾಗಿದ್ದು ಅಂತಹ ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗುತ್ತದೆ ಪಠ್ಯ ಶಿಕ್ಷಣದ…
ಸಚಿವ ಬಿ.ನಾಗೇಂದ್ರರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿರುವುದಕ್ಕೆ ವಿರೋಧಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು : ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ನಡೆಯನ್ನು ಖಂಡಿಸಿ ಮಾಜಿ ನಗರಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಜಿಲ್ಲಾ ಪಂಚಾಯತ್ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಸಚಿವ ಬಿ.ನಾಗೇಂದ್ರ ಅವರ ಭಾವಚಿತ್ರವನ್ನು ಹಿಡಿದುಕೊಂಡು ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಮೈಸೂರು ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ, ಸಚಿವ ಬಿ.ನಾಗೇಂದ್ರ ಅವರ ಪುನರ್‌ಸೇರ್ಪಡೆ ವಿರೋಧಿಸುತ್ತಿರುವ ಬಿಜೆಪಿ ನಾಯಕರು, ಮೊದಲು ತಮ್ಮ ಆಡಳಿತಾವಧಿಯ ಭ್ರಷ್ಟಾಚಾರದ ಇತಿಹಾಸವನ್ನು…
ಜೀವನದಲ್ಲಿ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಶ್ರಾವಣ ಮಾಸ ಅತ್ಯಂತ ಪ್ರಶಸ್ತ; ಡಾ. ಹರ್ಷ ಪ್ರಿಯಂವದ
ಮೈಸೂರು; ಜೀವನದಲ್ಲಿ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಶ್ರಾವಣ ಮಾಸ ಅತ್ಯಂತ ಪ್ರಶಸ್ತವಾದುದು ಎಂದು ಮೈಸೂರು ಉಪ ಪೊಲೀಸ್‌ಆಯುಕ್ತರಾದ ಡಾ.ಹರ್ಷ ಪ್ರಿಯಂವದ ಹೇಳಿದರು.ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠದಲ್ಲಿ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದ್ದ ಶ್ರಾವಣ ಮಾಸದ ಪೂಜಾನುಷ್ಠಾನ ಮತ್ತು ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರಾವಣ ಮಾಸ ಭಾರತೀಯರಿಗೆ ಅತ್ಯಂತ ವಿಶೇಷವಾದ ತಿಂಗಳು.ನಾನು ಮೂಲತಃ ಜಾರ್ಖಾಂಡ್‌ನವಳಾಗಿದ್ದು ಅಲ್ಲಿಯೂ ಕೂಡ ಈ ಮಾಸವನ್ನು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಉತ್ಸಾಹಗಳಿಂದ ಆಚರಿಸಲಾಗುತ್ತದೆ.ಭಾರತೀಯರಲ್ಲಿ ಸಂಸ್ಕೃತಿ,…
ಹೊಸಮಠದ ಶ್ರೀಗಳು ಲಿಂಗೈಕ್ಯ : ಸುತ್ತೂರು ಶ್ರೀಮಠದಲ್ಲಿ ಸಂತಾಪ
ಮೈಸೂರು; ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ ಲಿಂಗೈಕ್ಯರಾದ ಮೈಸೂರಿನ ಹೊಸಮಠದ ಶ್ರೀ ಚಿದಾನಂದ ಸ್ವಾಮಿಗಳಿಗೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ವೇಳೆ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಶ್ರೀ ಚಿದಾನಂದ ಸ್ವಾಮಿಗಳು ಶ್ರೀ ಹೊಸಮಠದ ಪೀಠಾಧ್ಯಕ್ಷರಾಗಿ 1982ರಂದು ನೇಮಕಗೊಂಡರು. ಶಿಶು ಶಿಕ್ಷಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು.ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು.ಶ್ರೀಗಳು ಉತ್ತಮ ಸಂಘಟಕರು, ಕ್ರಿಯಾಶೀಲರೂ ಆಗಿದ್ದರು.ಕೆಲ ತಿಂಗಳ ಹಿಂದೆ ಶ್ರೀ ಸಿದ್ಧಬಸವ ಸ್ವಾಮಿಗಳನ್ನು…
ಅಪರೂಪದ ನಾಣ್ಯ, ನೋಟು ಹಾಗೂ ಅಂಚೆ ಚೀಟಿಗಳ ಪ್ರದರ್ಶನ
ಮೈಸೂರು; ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ 80ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಒಂದು ದಿನದ ಅಪೂರ್ವ ನಾಣ್ಯ, ನೋಟು ಮತ್ತು ಅಂಚೆ ಚೀಟಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಡಿ.ಎಸ್. ಪ್ರತಿಮಾ ಪ್ರದರ್ಶನವನ್ನು ಉದ್ಘಾಟಿಸಿದರು. ಹುಣಸೂರಿನ ಅಪೂರ್ವ ನಾಣ್ಯ ಸಂಗ್ರಹಕಾರ ಪಿ ಕೆ ಕೇಶವಮೂರ್ತಿ ಅವರ ಸಹಕಾರದೊಂದಿಗೆ, 180ನೇ ಪ್ರದರ್ಶನದಲ್ಲಿ ಕ್ರಿಸ್ತಶಕ 1ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್‌ಮಾರ್ಕ್…
- 1
- 2