
ಮೈಸೂರು; ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ ಲಿಂಗೈಕ್ಯರಾದ ಮೈಸೂರಿನ ಹೊಸಮಠದ ಶ್ರೀ ಚಿದಾನಂದ ಸ್ವಾಮಿಗಳಿಗೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಶ್ರೀ ಚಿದಾನಂದ ಸ್ವಾಮಿಗಳು ಶ್ರೀ ಹೊಸಮಠದ ಪೀಠಾಧ್ಯಕ್ಷರಾಗಿ 1982ರಂದು ನೇಮಕಗೊಂಡರು. ಶಿಶು ಶಿಕ್ಷಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು.ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು.ಶ್ರೀಗಳು ಉತ್ತಮ ಸಂಘಟಕರು, ಕ್ರಿಯಾಶೀಲರೂ ಆಗಿದ್ದರು.ಕೆಲ ತಿಂಗಳ ಹಿಂದೆ ಶ್ರೀ ಸಿದ್ಧಬಸವ ಸ್ವಾಮಿಗಳನ್ನು ಉತ್ತರಾಧಿಕಾರಿಗಳನ್ನಾಗಿ ನೇಮಿಸಿದರು.ಶ್ರೀಗಳು ಸಮಾಜಕ್ಕೆ ಮತ್ತು ಸದ್ಭಕ್ತರಿಗೆ ಮಾರ್ಗದರ್ಶನವನ್ನು ನೀಡುತ್ತಿದ್ದರು.ಶ್ರೀ ಸುತ್ತೂರು ಮಠದ ಮೇನ್ ಬಿಲ್ಡಿಂಗ್ ಹಾಸ್ಟೆಲ್‌ನಲ್ಲಿ ಕೆಲಕಾಲ ಕಾರ್ಯನಿರ್ವಹಿಸಿದ್ದರು ಎಂದು ಸ್ಮರಿಸಿದರು.
ಶ್ರೀಗಳÀ ಅಗಲುವಿಕೆಗೆ ಮೌನಾಚರಣೆಯನ್ನು ಆಚರಿಸಿ ಭಕ್ತಾದಿಗಳು ಹಾಗೂ ಸಮಾಜಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಪ್ರಾರ್ಥಿಸಲಾಯಿತು.