Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅಂತಹ ಮಹನೀಯರನ್ನು ನೆನೆಯುವುದು ನಮ್ಮ ಕರ್ತವ್ಯ: ದೇವೇಂದ್ರ

ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಪಿರಿಯಾಪಟ್ಟಣ: ಅನೇಕರ ತ್ಯಾಗದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅಂತಹ ಮಹನೀಯರನ್ನು ನೆನೆಯುವುದು ನಮ್ಮ ಕರ್ತವ್ಯ ಎಂದು ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರ ತಿಳಿಸಿದರು  ತಾಲೂಕಿನ ಕಂಪಲಾಪುರ ನಾಗ ಎಕ್ಸ್ಪರ್ಟ್ ಪಬ್ಲಿಕ್ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು ಬ್ರಿಟಿಷರ ದಾಸ್ಯದಿಂದ ಭಾರತವನ್ನು ಬಿಡುಗಡೆಗೊಳಿಸಿದರ ಫಲವಾಗಿ ಇಂದು ಭಾರತ ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಸಾಕಷ್ಟು…

Read More

ಆ.18ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆ.18ರಂದು ಮಂಗಳವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ….

Read More

ವಿದ್ಯಾರ್ಥಿಗಳು ದೇಶದ ನಿಜವಾದ ರಾಯಭಾರಿಗಳು

ಮೈಸೂರು: ವಿದ್ಯಾರ್ಥಿಗಳೇ ಒಂದು ದೇಶದ ನಿಜವಾದ ರಾಯಭಾರಿಗಳು. ಅವರು ದೇಶದ ಪ್ರತಿಷ್ಠೆಯನ್ನು ವಿಶ್ವ ಮಟ್ಟಕ್ಕೆ ಏರಿಸಲು ಸಾಧ್ಯ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ ವಿ ಎಂ ಹೇಳಿದರು.ನಗರದ ಮೈಸೂರು ಇನ್ಸಿ÷್ಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಕಲಿನರಿ (ಎಂಐಎಚ್‌ಎAಸಿ) ನಲ್ಲಿ ಇಂದು ದೇಶದ 80ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಕೌಶಲ್ಯ ಶಿಕ್ಷಣ ಇಂದಿನ ತುರ್ತು. ವಿದ್ಯಾರ್ಥಿಗಳು ನಮ್ಮ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು…

Read More

ಮೈಸೂರು ರೈಲ್ವೆ ವಿಭಾಗದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ

ಮೈಸೂರು; ನೈರುತ್ಯ, ಮೈಸೂರು ವಿಭಾಗದಿಂದ ರೈಲ್ವೆಯಿಂದ 80ನೇ ಸ್ವಾತಂತ್ರ÷್ಯ ದಿನಾಚರಣೆಯನ್ನು ಮೈಸೂರು ರೈಲ್ವೆ ಮೈದಾನದಲ್ಲಿ ದೇಶಭಕ್ತಿ ಮತ್ತು ಸಂಭ್ರಮದಿ0ದ ಆಚರಿಸಲಾಯಿತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ರಾಷ್ಟçಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸರಕು ಸಾಗಣೆ 9.74% ಹೆಚ್ಚಾಗಿದೆ ಹಾಗೂ ಸರಕು ರೈಲುಗಳ ವೇಗದಲ್ಲಿ 14% ಏರಿಕೆಯಾಗಿದೆ. ಎನ್‌ಎಂಜಿ ಲೋಡಿಂಗ್‌ನಲ್ಲಿ 43% ಹೆಚ್ಚಳವಾಗಿದ್ದು, ದ್ವಿಚಕ್ರ ವಾಹನಗಳ ಸಾಗಣೆಯಲ್ಲಿ 53% ಏರಿಕೆ ಕಂಡುಬAದಿದೆ. ಗತಿ ಶಕ್ತಿ ಕಾರ್ಗೋ ಟರ್ಮಿನಲ್…

Read More

ಶ್ರದ್ಧೆ, ಪ್ರಾಮಾಣಿಕತೆ, ಪರಿಶ್ರಮದಿಂದ ಕಾರ್ಯನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಬಲ ನೀಡೋಣ; ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ

ಮೈಸೂರು: ಗ್ರಾಹಕರಿಗೆ ಉತ್ತಮ ಗುಣಮಟ್ಟದ, ನಿರಂತರ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ಪರಿಶ್ರಮದಿಂದ ಕಾರ್ಯನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಬಲ ನೀಡೋಣ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ ಹೇಳಿದರು.ಶನಿವಾರ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಚಾವಿಸನಿನಿ ನಿಗಮ ಕಚೇರಿಯಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ÷್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ದೇಶಕ್ಕೆ ಸ್ವಾತಂತ್ರ÷್ಯ ದೊರಕಿಸಿಕೊಡಲು ತಮ್ಮ ಜೀವ ಹಾಗೂ…

Read More

ಆಯಾಕ್ಷೇತ್ರದ ಜನರು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ಪಾಲಿಸಿದರೆ ಸಾಕು, ದೇಶ ಸುಭಿಕ್ಷವಾಗಿರುತ್ತದೆ; ಪ್ರೊ. ನಿರಂಜನವಾನಳ್ಳಿ

ಮೈಸೂರು ; ಆಯಾಕ್ಷೇತ್ರದ ಜನರು ನಿಷ್ಠೆಮತ್ತುಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ಪಾಲಿಸಿದರೆ ಅಷ್ಟೇ ಸಾಕು, ದೇಶ ಸುಭಿಕ್ಷವಾಗಿರುತ್ತದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ನಿರಂಜನವಾನಳ್ಳಿ ಹೇಳಿದರು.ಶನಿವಾರ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿಏರ್ಪಡಿಸಿದ್ದ 80ನೇ ಸ್ವಾತಂತ್ರ÷್ಯದಿನಾಚರಣೆಯ ಮುಖ್ಯಅತಿಥಿಯಾಗಿಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಬದುಕು ನಡೆಸಲು ಹಣಬೇಕು, ಅದನ್ನು ಖರ್ಚು ಮಾಡಲು ಸಮಯಬೇಕು. ಆದರೆ, ಈ ಎರಡೂ ಇದ್ದುಸ್ವಾತಂತ್ರ÷್ಯವೇ ಇಲ್ಲದಿದ್ದರೆ ಅವೆರಡೂ ವ್ಯರ್ಥ. ಸ್ವಾತಂತ್ರ÷್ಯದ ಬೆಲೆ ಅದನ್ನು ಕಳೆದುಕೊಂಡಾಗ ಮಾತ್ರ ಗೊತ್ತಾಗುತ್ತದೆ” ಎಂದರು.“ನಮ್ಮಲ್ಲಿಒಗ್ಗಟ್ಟಿಲ್ಲದ ಕಾರಣಕ್ಕೇ…

Read More

ವಿಜ್ಞಾನವು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದರೊಂದಿಗೆ ಮೂಢನಂಬಿಕೆಗಳನ್ನು ದೂರ ಮಾಡುತ್ತದೆ; ಡಾ. ಜಿ. ಎ. ರವಿಶಂಕರ್

ಮೈಸೂರು; ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ವಿಶೇಷ ಚೇತನರ ಸಂಸ್ಥೆಯ ಶಾಲಾ ಆವರಣದಲ್ಲಿ 80ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾರತದ ಖ್ಯಾತ ವಿಜ್ಞಾನಿ ಹಾಗೂ ಜೀವ ತಂತ್ರಜ್ಞಾನ ಕ್ಷೇತ್ರದ ತಜ್ಞ ಡಾ. ಜಿ. ಎ. ರವಿಶಂಕರ್ (ಡಾ. ಗೋಕರೆ ಅಶ್ವಥನಾರಾಯಣ ರವಿಶಂಕರ್) ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರö್ಯಕ್ಕಾಗಿ ಸುಮಾರು ಇನ್ನೂರು ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಲಕ್ಷಾಂತರ ಮಂದಿ ತಮ್ಮ ಪ್ರಾಣ ಹಾಗೂ ಬದುಕನ್ನು ತ್ಯಾಗ ಮಾಡಿದ್ದಾರೆ. ಈ…

Read More

ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು; ನಮ್ಮದೇಶ ಪ್ರೇಮ ಸ್ವಾತಂತ್ರö್ಯ ದಿನಾಚರಣೆಯ ಸಂಭ್ರಮಕ್ಕಷ್ಟೇ ಸೀಮಿತಗೊಳ್ಳಬಾರದು.ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ನಗರದ ಬನ್ನಿಮಂಟಪ ಕವಾಯಿತು ಮೈದಾನದಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಏರ್ಪಡಿಸಲಾಗಿದ್ದ 80 ನೇ ಸ್ವಾತಂತ್ರ÷್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬ್ರಿಟಿಷರದಾಸ್ಯದಿಂದ ಮುಕ್ತವಾದ ಈ ದಿನ ಭಾರತೀಯರೆಲ್ಲರ ಪಾಲಿಗೆ ಸಂಭ್ರಮದ ದಿನವಾಗಿದೆ.ಮಹಾತ್ಮಗಾಂಧೀಜಿ, ಜವಾಹರ್ ಲಾಲ್ ನೆಹರು, ಸರ್ಧಾರ್ ವಲ್ಲಭಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತಿç, ಬಾಲ…

Read More

ಗುಂಡೇಟಿಗೆ ಮೂವರ ಬಲಿ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇದೆ. ಘಟನೆ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ ಸಚಿವ ಸಿ.ಪುಟ್ಟರಂಗಶೆಟ್ಟಿ

ಮೈಸೂರು: ವನ್ಯ ಜೀವಿಗಳನ್ನು ಬೇಟೆಯಾಡಿಕೊಂಡು ವಾಪಸ್ ಬರುವಾಗ ಗುಂಡು ಹೊಡೆದರು, ಹಾಗಾಗಿ ರಕ್ಷಣೆಗಾಗಿ ಪ್ರತಿ ಗುಂಡಿನ ದಾಳಿ ನಡೆಸಿದಾಗ ಮೂವರು ಸಾವಿಗೀಡಾಗಿದ್ದಾರೆ ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದನ್ನ ನಂಬುವ ಸ್ಥಿತಿಯಲ್ಲಿ ನಾನು ಇಲ್ಲ. ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪುö್ಪ ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿರುವ ಹನೂರು…

Read More

ಅರಣ್ಯ ಇಲಾಖೆ ಸಿಬ್ಬಂದಿಗೆಯೊAದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬಲಿ, ಮತ್ತೊಬ್ಬನಿಗೆ ಗಾಯ

*ರೊಚ್ಚಿಗೆದ್ದ ಮೃತನ ಸಂಬAಧಿಕರು, ಗ್ರಾಮಸ್ಥರಿಂದ ಅರಣ್ಯ ಇಲಾಖೆಯ ಕಚೇರಿ ಧ್ವಂಸಹನೂರು; ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ-ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬಲಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಮೃತರ ಸಂಬAಧಿಕರು ಅರಣ್ಯ ಇಲಾಖೆಯ ಕಚೇರಿಯನ್ನ ಧ್ವಂಸಗೊಳಿಸಿದ್ದಾರೆ.ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,ಸ್ಥಳೀಯರು ಆತಂಕಗೊAಡಿದ್ದಾರೆ.ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ…

Read More