Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನ ವಿವಿಧೆಡೆ ಸಂಭ್ರಮದಿ0ದ ನಡೆದ 80 ನೇ ಸ್ವಾತಂತ್ರ‍್ಯ ದಿನಾಚರಣೆ


ಮೈಸೂರು; ಅರಮನೆ ನಗರಿ ಮೈಸೂರಿನ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳು, ಶಾಲಾ-ಕಾಲೇಜ್‌ಗಳಿಂದ 80 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿ0ದ ಆಚರಿಸಲಾಯಿತು.
80ನೇ ವರ್ಷದ ಸ್ವಾತಂತ್ರೊತ್ಸವ ಆಚರಣೆಯನ್ನು ಕಾಮಧೇನು ಕಾನ್ವೆಂಟ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಚಿತ್ರ ನಟ ಎಸ್.ಜಯಪ್ರಕಾಶ್(ಜೆಪಿ) ಮಾತನಾಡಿ, ಭಾರತ ದೇಶ ಅತಿ ಶೀಘ್ರದಲ್ಲೇ ವಿಶ್ವಗುರು ಆಗುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.
ಅನೇಕ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಶಾಲೆಯ ಅಧ್ಯಕ್ಷ ಭೈರಪ್ಪ, ಪ್ರಾಂಶುಪಾಲ, ಶಾಲೆಯ ಪದಾಧಿಕಾರಿಗಳಾದ ಮಹದೇವು, ಪುಷ್ಪಗೌಡ, ಪವನ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ;
ಮೈಸೂರಿನ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ದೇಶಭಕ್ತಿ, ಶ್ರದ್ಧೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಡಾ. ಗಜಾನನ ಹೆಗಡೆ , “ಸ್ವಾತಂತ್ರ‍್ಯ ಎಂಬುದು ಕೇವಲ ಮುಕ್ತಿಯಲ್ಲ; ಅದು ರಾಷ್ಟ್ರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಹೊಣೆಗಾರಿಕೆ, ಸೃಜನಶೀಲತೆ ಮತ್ತು ಕ್ರಿಯಾಶೀಲತೆಯನ್ನು ಒಳಗೊಂಡಿರುತ್ತದೆ” ಎಂದು ಹೇಳಿದರು. ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸುವ ಜತೆಗೆ, ಭಾರತದ ಸ್ವಾತಂತ್ರ‍್ಯದ ಹಿಂದಿನ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕೆಂದು ಹೇಳಿದರು.
ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ. ವಿಜಯ ವಿಠ್ಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್, ವಿಜಯ ವಿಠ್ಠಲ ವಿದ್ಯಾಶಾಲೆಯ ಪ್ರಾಂಶುಪಾಲ ವೀಣಾ ಎಸ್. ಎ. ಹಾಗೂ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಜೆಎಸ್‌ಎಸ್ ಪಬ್ಲಿಕ್ ಶಾಲೆ;
ಜೆ.ಪಿ.ನಗರದ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಶಿಸ್ತು ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚೇತನ್ ಕುಮಾರ್ ಹಾಗೂ ಶಾಲೆಯ ಪ್ರಾಂಶುಪಾಲರಾದ ಅರ್ಚನಾ ಎಸ್.ಎನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಹಾಡಿ, ಸ್ವಾತಂತ್ರ‍್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ಬ್ಯಾಂಡ್ ತಂಡದವರು ಅತ್ಯುತ್ತಮ ಬ್ಯಾಂಡ್ ಪ್ರದರ್ಶನವನ್ನು ನೀಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿ ವಿತರಿಸಲಾಯಿತು. “ವೈವಿಧ್ಯದಲ್ಲಿ ಏಕತೆ” ಎಂಬ ಸಂದೇಶವನ್ನು ಸಾರುತ್ತಾ, ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯೊಂದಿಗೆ ಸ್ವಾತಂತ್ರ‍್ಯ ದಿನಾಚರಣೆಗೆ ಅರ್ಥಪೂರ್ಣ ತೆರೆ ಎಳೆಯಲಾಯಿತು.

ರುಡ್ ಸೆಟ್ ಸಂಸ್ಥೆ;
ನಗರಗದ ರುಡ್‌ಸೆಟ್ ಸಂಸ್ಥೆಯಲ್ಲಿ ದೇಶದ 80ನೇ ಸ್ವಾತಂತ್ರö್ಯ ದಿನದ ಸಂಭ್ರಮಾಚರಣೆಯನ್ನು ಸಂಸ್ಥೆಯ ಆವರಣದಲ್ಲಿ ಸಂಭ್ರಮದಿAದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟçದ ಸ್ವಾತಂತ್ರö್ಯಕ್ಕಾಗಿ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟçದ ದ್ವಜಾರೋಹಣ ನೆರವೇರಿಸಿ, ವಂದೇ ಮಾತರಂ ಹಾಗೂ ರಾಷ್ಟçಗೀತೆ ಹಾಡಲಾಯಿತು. ನಂತರ ಮಾತನಾಡಿದ ಗಣ್ಯರು, ಸ್ವಾತಂತ್ರö್ಯವು ನಮಗೆ ನೀಡಿರುವ ಹಕ್ಕುಗಳ ಜೊತೆಗೆ ದೇಶÀದ ಅಭಿವೃದ್ಧಿ ಮತ್ತು ಪ್ರಗತಿಗೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಹೆಮ್ಮೆಯ ಶಿಬಿರಾರ್ಥಿ ಹಾಗೂ ಯಶಸ್ವಿ ಉದ್ಯಮಿ ಶ್ರೇಯಾಂಕ್, ಜಿ ಎಸ್ ಅವರಿಗೆ ಗೌರವ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ನಿರ್ದೇಶಕರು, ಸಿಬ್ಬಂದಿ, ತರಬೇತುದಾರರು, ಗಣ್ಯರು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡು ಸಂಭ್ರಮಿಸಿದರು.
ಕೆ ಎನ್ ಸಿ ಇನ್ನೋವೇಟಿವ್ ಗ್ಲೋಬಲ್ ಶಾಲೆ ;
ಮೈಸೂರಿನ ಹೆಬ್ಬಾಳಿನಲ್ಲಿರುವ ಕೆ ಎನ್ ಸಿ ಇನ್ನೋವೇಟಿವ್ ಗ್ಲೋಬಲ್ ಶಾಲೆ ಮತ್ತು ಕಾಲೇಜಿನ ಆವರಣದಲ್ಲಿ 80ನೇ ಸ್ವಾತಂತ್ರ÷್ಯ ದಿನಾಚರಣೆಯನ್ನು ದಿನಾಂಕ 15.08.2026ರ ಶನಿವಾರದಂದು ಆಚರಿಸಲಾಯಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಸಿ.ಕಾಂತರಾಜು ಧ್ವಜಾರೋಹಣವನ್ನು ನೆರವೇರಿಸಿದರು. ಶಾಲಾ ಮಕ್ಕಳಿಂದ ಪಥಸಂಚಲನದ ಮೂಲಕ ಗೌರವ ವಂದನೆಯನ್ನು ಸ್ವೀಕರಿಸಿದ ನಂತರ ಮಾತನಾಡಿ, ಸ್ವಾತಂತ್ರ÷್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ಸ್ವಾತಂತ್ರ÷್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಎನ್ ಚಂದ್ರಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಜೋಸೆಫ್ ಫ್ರಾಂಕ್ ಬಿ ಹಾಗೂ ಕಾಲೇಜಿನ ಪ್ರಾಂಶುಪಾಲ ತೇಜಸ್ ಕೆ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳಾದ ದೇಶದ ಐಕ್ಯತೆಯನ್ನು ಸಾರುವ ದೇಶಭಕ್ತಿಗೀತೆ, ನಾಟಕ ಮತ್ತು ನೃತ್ಯಗಳು ತುಂಬಾ ಅದ್ಭುತವಾಗಿ ಮೂಡಿಬಂದವು.
ಬಿಎಸ್‌ಎಸ್ ವಿದ್ಯೋದಯ ಶಾಲೆ;
ನಗರದ ಬಿಎಸ್‌ಎಸ್ ವಿದ್ಯೋದಯ ಶಾಲೆಯಲ್ಲಿ 80 ನೇ ಸ್ವಾತಂತ್ರ÷್ಯದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.
ವಂದೇಮಾತರA, ಧ್ವಜಾರೋಹಣ, ರಾಷ್ಟçಗೀತೆ, ಧ್ವಜಗೀತೆ ಹಾಗೂ ಪಥಸಂಚಲನ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆಯುರ್ವೇದ ವೈದ್ಯ
ಡಾ. ಎ. ಎಸ್. ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು, ಜ್ಞಾನ, ದೇಶ ಭಕ್ತಿ ಮತ್ತು ಸಮಾಜ ಸೇವೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ವಾಸುದೇವಭಟ್, ಮುರುಳೀಧರ, ಪ್ರಾಂಶುಪಾಲ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.