Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜ್ಞಾನವು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದರೊಂದಿಗೆ ಮೂಢನಂಬಿಕೆಗಳನ್ನು ದೂರ ಮಾಡುತ್ತದೆ; ಡಾ. ಜಿ. ಎ. ರವಿಶಂಕರ್


ಮೈಸೂರು; ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ವಿಶೇಷ ಚೇತನರ ಸಂಸ್ಥೆಯ ಶಾಲಾ ಆವರಣದಲ್ಲಿ 80ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತದ ಖ್ಯಾತ ವಿಜ್ಞಾನಿ ಹಾಗೂ ಜೀವ ತಂತ್ರಜ್ಞಾನ ಕ್ಷೇತ್ರದ ತಜ್ಞ ಡಾ. ಜಿ. ಎ. ರವಿಶಂಕರ್ (ಡಾ. ಗೋಕರೆ ಅಶ್ವಥನಾರಾಯಣ ರವಿಶಂಕರ್) ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರö್ಯಕ್ಕಾಗಿ ಸುಮಾರು ಇನ್ನೂರು ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಲಕ್ಷಾಂತರ ಮಂದಿ ತಮ್ಮ ಪ್ರಾಣ ಹಾಗೂ ಬದುಕನ್ನು ತ್ಯಾಗ ಮಾಡಿದ್ದಾರೆ. ಈ ಮಹನೀಯರ ತ್ಯಾಗವನ್ನು ನಾವು ಗೌರವಿಸಬೇಕು. ದೇಶದ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.
ವಿಜ್ಞಾನ ಸಂಶೋಧನೆಗಳು ಕೇವಲ ಪ್ರಯೋಗಾಲಯಗಳಿಗೆ ಸೀಮಿತವಾಗದೆ ಜನಸಾಮಾನ್ಯರನ್ನು ತಲುಪಿದಾಗ ಮಾತ್ರ ,ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ. ವಿಜ್ಞಾನವು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದರ ಜೊತೆಗೆ ಮೂಢನಂಬಿಕೆಗಳನ್ನು ದೂರ ಮಾಡುತ್ತದೆ ಮತ್ತು ದೈನಂದಿನ ಜೀವನದ ಸಮಸ್ಯೆಗಳಿಗೆ ಸರಳ ಹಾಗೂ ಪರಿಣಾಮಕಾರಿ ಪರಿಹಾರಗಳನ್ನು ಒದಗಿಸುತ್ತದೆ ಎಂದರು.
ವಿವಿಧತೆಯಲ್ಲಿ ಏಕತೆ ನಮ್ಮ ರಾಷ್ಟçದ ವಿಶೇಷತೆ. ಭಿನ್ನತೆಗಳನ್ನು ಮರೆತು ಪರಸ್ಪರ ಗೌರವದಿಂದ ಹಾಗೂ ಸಾಮರಸ್ಯದಿಂದ ಬದುಕುವುದು ದೇಶದ ಆಂತರಿಕ ಭದ್ರತೆ ಮತ್ತು ಅಭಿವೃದ್ಧಿಗೆ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿತೈಷಿ ಶೈಲಜಾ, ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು, ಸಂಯೋಜಕರಾದ ಮಂತೇಶ್, ಚೈತ್ರಕುಮಾರಿ, ಶಾಲೆಯ ಮುಖ್ಯೋಪಾಧ್ಯಾಯರಾದ ಬ್ರಹ್ಮರಂಭ, ವಿಶೇಷ ಶಿಕ್ಷಕರಾದ ಪದ್ಮ, ವಿದ್ಯಾವತಿ, ಬೃಂದಾಬಾಯಿ, ಸ್ಪರ್ಶ, ಅಭಿಲಾಷಾ, ತ್ರಿವೇಣಿ, ಮಹಾದೇವ, ಮಂಜುಳ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು