Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾನೂನು ಸ್ವಯಂ ಸೇವಕರುಗಳಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಮೈಸೂರು; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಆಯ್ಕೆಯಾಗಿರುವ ಅರೆಕಾಲಿಕ ಕಾನೂನು ಸ್ವಯಂ ಸೇವಕರುಗಳಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 17 ಮತ್ತು 18 ರಂದು ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ…

Read More

ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆಯಿ0ದ ಮಾತ್ರ ಸಮಾಜದಲ್ಲಿ ನಿಜವಾದ ಸಮಾನತೆ ಸಾಧ್ಯ:ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು ; ಶೋಷಿತ ದಲಿತ ಹಾಗೂ ಹಿಂದುಳಿದ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ನಿಜವಾದ ಸಮಾನತೆ ಸಾಧ್ಯ ಎಂದು ಮಾನ್ಯ ನಗರಾಭಿವೃದ್ಧಿ ಸಚಿವರು ಮತ್ತು ಮೈಸೂರು ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಬಾಬು ಜಗಜೀವನ್ ರಾಂ ಸಭಾಂಗಣದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವತಿಯರಿಗೆ ಉಚಿತ ಟೈಲರಿಂಗ್ ಯಂತ್ರೋಪಕರಣ ಮತ್ತು ತರಬೇತಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ಭವ್ಯ ಭಾರತದ ನಿರ್ಮಾಣಕ್ಕೆ ಇಂದಿನ ಯುವಕರ ಪಾತ್ರ ಬಹಳ ಮುಖ್ಯವಾದದ್ದು :ಆರ್ ಎಸ್ ಚಿಕ್ಕವೀರಪ್ಪ

ಪಿರಿಯಾಪಟ್ಟಣ : ಭವ್ಯ ಭಾರತದ ನಿರ್ಮಾಣಕ್ಕೆ ಇಂದಿನ ಯುವಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ಮಾಜಿ ಜಿ.ಪಂ ಸದಸ್ಯ ಹಾಗೂ ಕೆಪಿಎಸ್ ಶಾಲೆಯ ಉಪಾಧ್ಯಕ್ಷ ಆರ್ ಎಸ್ ಚಿಕ್ಕವೀರಪ್ಪ ತಿಳಿಸಿದರು  ತಾಲೂಕಿನ ರಾವಂದೂರು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು  ಸ್ವತಂತ್ರ ಬಂದು 79 ವರ್ಷ ಕಳೆದರೂ ಭಾರತೀಯರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಇನ್ನೂ ಸರಿಯಾಗಿ ಸಮರ್ಪಕವಾಗಿ ಸಿಗುತ್ತಿಲ್ಲ ಹಾಗೂ ವಿದ್ಯಾರ್ಥಿಗಳು ನಮ್ಮ ದೇಶಕ್ಕಾಗಿ ಪ್ರಾಣ…

Read More

ಶ್ರೀ ಪರಕಾಲ ಮಠಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಭೇಟಿ

ಮೈಸೂರು; ನಗರದಲ್ಲಿರುವ ಶ್ರೀ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದ 36ನೇ ಪೀಠಾಧಿಪತಿಗಳಾದ ಶ್ರೀಮದ್ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಹಾದೇಶಿಕರ ಚಾತುರ್ಮಾಸ್ಯ ವ್ರತದ ಅಂಗವಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶ್ರೀಗಳಿಗೆ ಫಲ-ತಾಂಬೂಲ ಸಮರ್ಪಿಸಿದ ಅವರು, ಶ್ರೀಗಳ ಆಶೀರ್ವಾದ ಪಡೆದುಕೊಂಡರು.ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ಎಸ್. ರಂಗನಾಥ, ರಾಮಾನುಜ ಅಭ್ಯುದಯ ಸಂಘದ ಅಧ್ಯಕ್ಷ ರಾಜಗೋಪಾಲ್,…

Read More

26ನೇ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಮೈಸೂರಿನ ಮಾದಪ್ಪ ಯೋಗೇಂದ್ರ ಭಾಗಿಮೈಸೂರು; ನಗರದ ಗುರು ರೆಸಿಡೆನ್ಸಿಯಲ್ಲಿ ಇಂದು ಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ, ದಕ್ಷಿಣ ಕೊರಿಯಾದ ಡೆಗೂ ನಗರದಲ್ಲಿ ನಡೆಯಲಿರುವ 26ನೇ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಭಾಗವಹಿಸುತ್ತಿರುವ ಅಂತರರಾಷ್ಟಿçÃಯ ಕ್ರೀಡಾಪಟು ಹಾಗೂ ಕ್ಲಬ್ ನ ಕಾರ್ಯದರ್ಶಿ ಮಾದಪ್ಪ ಯೋಗೇಂದ್ರ ಅವರನ್ನು ಸನ್ಮಾನಿಸಿ, ಅವರಿಗೆ ಶುಭ ಕೋರಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರ ಅಂಶಿ ಪ್ರಸನ್ನಕುಮಾರ್, ಟಿ.ಆರ್. ಸತೀಶ್…

Read More

ವಾಲ್ಮೀಕಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಆಗಬೇಕು; ಸಚಿವ ಡಾ.ಯತೀಂದ್ರಸಿದ್ದರಾಮಯ್ಯ

• ರಾಮಕೃಷ್ಣನಗರ ಐ ಬ್ಲಾಕ್‌ನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ನಾಯಕ ಚಾರಿಟಬಲ್ ಟ್ರಸ್ಟ್ ಕಚೇರಿ ಉದ್ಘಾಟನೆಮೈಸೂರು: ವಾಲ್ಮೀಕಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಆಗಬೇಕು. ಇತರೆ ಸಮಾಜಗಳಂತೆ ವಾಲ್ಮೀಕಿ ಸವಾಜಕೂಡ ಸರ್ವತೋಮುಖ ಅಭಿವೃದ್ಧಿ ಆಗಬೇಕಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರಸಿದ್ದರಾಮಯ್ಯ ಹೇಳಿದರು.ಭಾನುವಾರ ಮೈಸೂರಿನ ರಾಮಕೃಷ್ಣನಗರ ಐ ಬ್ಲಾಕ್‌ನ ವಾಸು ಬಡಾವಣೆಯಲ್ಲಿ ನೂತನವಾಗಿ ಶ್ರೀಮಹರ್ಷಿ ವಾಲ್ಮೀಕಿ ನಾಯಕ ಚಾರಿಬಟಲ್ ಟ್ರಸ್ಟ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ನಾಯಕರಾಗುವ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಸಾವಾಜಿಕ…

Read More

ಗುಂಡೇಟಿಗೆ ಮೂವರು ಬಲಿ ಪ್ರಕರಣ; ಅರಣ್ಯ ಇಲಾಖೆಯವರ ವಿರುದ್ಧ ಪೊಲೀಸರಿಂದ ಎಫ್ ಐಆರ್ ದಾಖಲು

ಹನೂರು ; ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯ ಗುಂಡಿನ ದಾಳಿಗೆ ಮೂವರು ಬಲಿಯಾದ ಘಟನೆಗೆ ಸಂಬ0ಧಿಸಿದ0ತೆ ಅರಣ್ಯಾಧಿಕಾರಿಗಳ ವಿರುದ್ಧ ಹನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.ಹನೂರು ತಾಲೂಕಿನ ತೋಮಿಯಾರ್ ಪಾಳ್ಯದ ಮೃತ ಆಂತೋಣಿಸ್ವಾಮಿ ಪತ್ನಿ ಲೂರ್ದಾಮೇರಿ ದೂರು ಕೊಟ್ಟಿದ್ದು, ರಾತ್ರಿ ಬಂಡೆ ಬಳಿ ಮಲಗಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದಾರೆAದು ತಿಳಿಸಿದ್ದಾರೆ. ಆ.14ರಂದು ಕಾಡಿಗೆ ಮೇಯಲು ಬಿಟ್ಟಿದ್ದ ಜಾನುವಾರುಗಳ ಪೈಕಿ ಎರಡು ಹಸುಗಳು ಮನೆಗೆ ವಾಪಸ್…

Read More

ಗುಂಡೇಟಿಗೆ ಮೂವರು ಬಲಿ ಪ್ರಕರಣ; ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ

*7 ದಿನದೊಳಗೆ ತನಿಖಾ ವರದಿ ನೀಡಲು ಸೂಚನೆಹನೂರು; ತಾಲೂಕಿನ ಕಾವೇರಿ ವನ್ಯ ಜೀವಿ ಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಸಿ 7 ದಿನದೊಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸಿ ದಿನೇಶ್ ಕುಮಾರ್ ಮೀನಾ , ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ…

Read More

ಅರಣ್ಯ ಇಲಾಖೆಯವರ ಗುಂಡೇಟಿಗೆ ಬಲಿಯಾದ ಮೂವರ ಕುಟುಂಬಗಳಿಗೆ ತಲಾ 15 ಲಕ್ಷರೂ ಪರಿಹಾರ

ಶಾಸಕ ಮಂಜುನಾಥ್ ಘೋಷಣೆ; ಮನವೊಲೈಕೆ ಬಳಿಕ ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು, ಮೃತರ ಕುಟುಂಬದವರುಹನೂರು; ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ವಲಯದಲ್ಲಿ ಅರಣ್ಯ ಇಲಾಖೆಯವರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಮೂವರು ಕುಟುಂಬದವರಿಗೆ ತಲಾ 15 ಲಕ್ಷರೂಗಳ ಪರಿಹಾರವನ್ನು ನೀಡುವುದಾಗಿ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಘೋಷಿಸಿದ್ದು, ಪ್ರತಿಭಟನಾನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಆಕ್ರೋಶಗೊಂಡು ಧರಣಿ ನಡೆಸುತ್ತಿದ್ದ ಕುಟುಂಬಸ್ಥರು ಹಾಗೂ ತೋಮಿಯಾರ್ ಪಾಳ್ಯ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಹೋರಾಟವನ್ನು ಕೈಬಿಟ್ಟಿದ್ದಾರೆ.ಶಾಸಕ ಎಂ.ಆರ್. ಮಂಜುನಾಥ್ ಅವರುಹನೂರು ಪಟ್ಟಣದಲ್ಲಿ…

Read More