Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀ ಪರಕಾಲ ಮಠಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಭೇಟಿ


ಮೈಸೂರು; ನಗರದಲ್ಲಿರುವ ಶ್ರೀ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದ 36ನೇ ಪೀಠಾಧಿಪತಿಗಳಾದ ಶ್ರೀಮದ್ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಹಾದೇಶಿಕರ ಚಾತುರ್ಮಾಸ್ಯ ವ್ರತದ ಅಂಗವಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀಗಳಿಗೆ ಫಲ-ತಾಂಬೂಲ ಸಮರ್ಪಿಸಿದ ಅವರು, ಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ಎಸ್. ರಂಗನಾಥ, ರಾಮಾನುಜ ಅಭ್ಯುದಯ ಸಂಘದ ಅಧ್ಯಕ್ಷ ರಾಜಗೋಪಾಲ್, ಮಠದ ಸ್ವಯಂಸೇವಕರಾದ ಪರಾಶರನ್, ಶೇಷಪ್ರಸಾದ್, ಭರತ್, ಟಿ.ಎಸ್. ಅರುಣ್, ಎನ್. ವಿಶ್ವನಾಥ್, ರಾಮಪ್ರಸಾದ್, ವೀಣಾ, ಲಕ್ಷಿ÷್ಮ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.