
ಪಿರಿಯಾಪಟ್ಟಣ : ಭವ್ಯ ಭಾರತದ ನಿರ್ಮಾಣಕ್ಕೆ ಇಂದಿನ ಯುವಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ಮಾಜಿ ಜಿ.ಪಂ ಸದಸ್ಯ ಹಾಗೂ ಕೆಪಿಎಸ್ ಶಾಲೆಯ ಉಪಾಧ್ಯಕ್ಷ ಆರ್ ಎಸ್ ಚಿಕ್ಕವೀರಪ್ಪ ತಿಳಿಸಿದರು
ತಾಲೂಕಿನ ರಾವಂದೂರು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸ್ವತಂತ್ರ ಬಂದು 79 ವರ್ಷ ಕಳೆದರೂ ಭಾರತೀಯರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಇನ್ನೂ ಸರಿಯಾಗಿ ಸಮರ್ಪಕವಾಗಿ ಸಿಗುತ್ತಿಲ್ಲ ಹಾಗೂ ವಿದ್ಯಾರ್ಥಿಗಳು ನಮ್ಮ ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದ ಮಹನೀಯರುಗಳನ್ನ ನೆನೆಯುವುದರ ಜೊತೆಗೆ ಅವರ ತತ್ವ ಆದರ್ಶಗಳನ್ನ ಮೈರೂಡಿಸಿಕೊಂಡಾಗ ಉತ್ತಮ ಪ್ರಜೆಗಳಾಗಲು ಸಾಧ್ಯವಾಗುತ್ತದೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರವು ಹಲವಾರು ಯೋಜನೆಗಳನ್ನ ರೂಪಿಸಿದ್ದು ಇದನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು
ಕಾರ್ಯಕ್ರಮದ ನಿಮಿತ್ತ ದೇಶಕ್ಕಾಗಿ ಬಲಿದಾನ ಮಾಡಿದ ಮಹನೀಯರ ವೇಷಭೂಷಣದೊಂದಿಗೆ ವಿದ್ಯಾರ್ಥಿಗಳ ಪಥಸಂಚಲನ ನಡೆಸಲಾಯಿತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು ಹಾಗೂ ರಾವಂದೂರು ಗ್ರಾಮದ ನಾಡಕಚೇರಿ ಗ್ರಾಮ ಪಂಚಾಯಿತಿ ಮುರುಘರಾಜೇಂದ್ರ ವಿದ್ಯಾ ಸಂಸ್ಥೆ ಮಾನಸ ಸೇವಾ ಸಂಸ್ಥೆ ಪ್ರಾಥಮಿಕ ಆರೋಗ್ಯ ಕೇಂದ್ರ ಆಟೋ ನಿಲ್ದಾಣಗಳು ಸೇರಿದಂತೆ ವಿವಿಧಡೆ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಕೋಟೆವೆಂಕಟೇಶ್, ಉಪ ಪ್ರಾಂಶುಪಾಲ ಸುರೇಶ್, ಮುಖ್ಯೋಪಾಧ್ಯಾಯಿನಿ ಲಿಲ್ಲಿ ಮೇರಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಂದ್ರ, ಜಲೇಂದ್ರ, ಸುರೇಶ್, ದಿನೇಶ್, ಹುಚ್ಚೇಗೌಡ, ಗೌರಮ್ಮ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.