ಕಾನೂನು ಸ್ವಯಂ ಸೇವಕರುಗಳಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮ
ಮೈಸೂರು; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಆಯ್ಕೆಯಾಗಿರುವ ಅರೆಕಾಲಿಕ ಕಾನೂನು ಸ್ವಯಂ ಸೇವಕರುಗಳಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 17 ಮತ್ತು 18 ರಂದು ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ಹಾಗೂ ಔಟ್ ಲಾಡ್ ಇಂಡಿಯಾ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಷಾರಾಣಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ –I ನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆನಂದ್ ಪಿ. ಹೊಗಾಡೆ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಉಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿಗಳಾದ (ಹಿರಿಯ) ಬಿ.ಇ. ಯೋಗೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು.ಆರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ, ಔಟ್ ಲಾಡ್ ಫೌಂಡೇಶನ್ನ ತರಬೇತುದಾರÀ ಶಮಾ ಡಿ ಹಾಗೂ ಅರೆಕಾಲಿಕ ಕಾನೂನು ಸ್ವಯಂ ಸೇವಕರುಗಳು ಉಪಸ್ಥಿತರಿರಲಿದ್ದಾರೆ.
--°C
Mysore, IN
Loading...