
ಮೈಸೂರು : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಮೈಸೂರು ವತಿಯಿಂದ ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರವಿ , ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ÷್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ದೇಶಭಕ್ತರು. ಅವರ ಧೈರ್ಯ, ಶಿಸ್ತು, ನಾಯಕತ್ವ ಮತ್ತು ರಾಷ್ಟçಪ್ರೇಮ ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಬೇಕು ಎಂದು ಹೇಳಿದರು.
ನೇತಾಜಿಯವರ ತ್ಯಾಗ, ಹೋರಾಟ ಮತ್ತು ದೇಶಭಕ್ತಿಯ ಆದರ್ಶಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು, ಶಿಕ್ಷಣ, ಕ್ರೀಡೆ, ಸಮಾಜ ಸೇವೆ ಹಾಗೂ ದೇಶ ನಿರ್ಮಾಣದಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಟಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ತ್ಯಾಗರಾಜ್, ಯೋಗ ಗುರುಗಳಾದ ಮಾಲ್ತೇಶ್ , ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಸಂಚಾಲಕ ರಾಘವೇಂದ್ರ ಡಿ., ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶಾದನಹಳ್ಳಿ ವಿಜಯ್ ಕುಮಾರ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.