ಹಡಪದ ಅಪ್ಪಣ್ಣ ಅವರ ವಿಚಾರಧಾರೆಗಳು ಸಮಾಜಕ್ಕೆ ದಾರಿದೀಪ: ಎನ್.ಆರ್.ಕಾಂತರಾಜ್
ಪಿರಿಯಾಪಟ್ಟಣ:12ನೇಯ ಶತಮಾನದ ವಚನಕಾರ ಹಾಗೂ ಸಾಮಾಜಿಕ ಕ್ರಾಂತಿ ಹರಿಕಾರ ಹಡಪದ ಅಪ್ಪಣ್ಣ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರ ವಿಚಾರಧಾರೆಗಳು ಸಮಾಜಕ್ಕೆ ದಾರಿದೀಪವಾಗಿದೆ ಎಂದು ಶಿಕ್ಷಕ ಎನ್.ಆರ್. ಕಾಂತರಾಜ್ ತಿಳಿಸಿದರು. ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಡಪದ ಅಪ್ಪಣ್ಣನವರ ಜೀವನ ಚರಿತ್ರೆ ತಿಳಿದುಕೊಳ್ಳುವ ಜತೆಗೆ ಅವರ ತತ್ವ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಇವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಗ್ರಾಮದ ಚನ್ನವೀರಪ್ಪ…