Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನಕ್ಕೆ ಚಾಲನೆ


ಮೈಸೂರು: ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ ಜಿ ರಾಮ್ ಜಿ) ಮೈಸೂರು ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ತಿಳಿಸಿದರು.
ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲಗಯ್ಯನಹುಂಡಿ ಗ್ರಾಮದಲ್ಲಿ ಹೊಸ ಜಾಬ್ ಕಾರ್ಡ್ ನೀಡುವ ಮೂಲಕ “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಡಿತರ ಚೀಟಿ ಸಲ್ಲಿಸಿ ಹೊಸದಾಗಿ ಉದ್ಯೋಗ ಚೀಟಿ ಪಡೆಯಬಹುದು ಎಂದು ಹೇಳಿದರು.
ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.
ವಾಜಮಂಗಲ ಪಿಡಿಒ ಜೆ.ಬಸವರಾಜು ಮಾತನಾಡಿ, ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯಡಿ ದೊರಕುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಕೆ.ರುಕ್ಮಾಂಗದ, ಕಾರ್ಯದರ್ಶಿ ಬೀರೇಶ್ ಕುಮಾರ್, ಎಸ್‌ಡಿಎಎ ಕುಮಾರಸ್ವಾಮಿ, ಐ.ಇ.ಸಿ ಸಂಯೋಜಕರು, ಡಿಇಒ ಮಂಜುನಾಥ್, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.