Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ.


ಮೈಸೂರು; ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಬಿಜೆಪಿಯ ಮೈಸೂರು ವಿಭಾಗದ ಸಹ ಪ್ರಭಾರಿಡಾ.ಈ.ಸಿ.ನಿಂಗರಾಜ್‌ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಪೂರ್ಣಾವಧಿ ಕಾರ್ಯಕರ್ತರಾಗಿ ಹಾಗೂ ರಾಷ್ಟಿçÃಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು, ವಿದ್ಯಾರ್ಥಿ ಜೀವನದಿಂದಲೇ ರಾಷ್ಟçಭಕ್ತಿ, ಸಾಮಾಜಿಕ ಸೇವೆ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ತಿಪಟೂರಿನ ಶಾಸಕರಾಗಿ, ಸಚಿವರಾಗಿ ಹಾಗೂ ಜನಪ್ರತಿನಿಧಿಯಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ ಎಂದು ತಿಳಿಸಿದ್ದಾರೆ.
ಬಿ.ಸಿ.ನಾಗೇಶ್‌ರ ನಿಧನದಿಂದ ಸಾರ್ವಜನಿಕ ಹಾಗೂ ಸಂಘಟನಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.