Day: August 21, 2026
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಐದನೇ ದಿನಕ್ಕೆ ಅಂತ್ಯ
*ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರುಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ಐದನೇ ದಿನವಾದ ಶುಕ್ರವಾರ ಅಂತ್ಯಗೊಳಿಸಲಾಯಿತು. ಪ್ರತಿಭಟನೆಯ ನೇತೃತ್ವವಹಿಸಿದ್ದ ಮುಖಂಡರುಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಐದನೇ ದಿನ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ…
ದೊಡ್ಡಕಮರವಳ್ಳಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಓದುವ ಹವ್ಯಾಸ ಬೆಳಸಿಕೊಳ್ಳಿ : ಕೀರ್ತಿ. ಟಿ ಜಿ ಪಿರಿಯಾಪಟ್ಟಣ : ವಿದ್ಯಾರ್ಥಿಗಳ ಓದುವ ಪ್ರೀತಿಯನ್ನು ಬೆಳೆಸುವ ಮತ್ತು ಅವರ ಜ್ಞಾನದ ಪರಿಧಿಯನ್ನು ವಿಸ್ತರಿಸುವ ಉದ್ದೇಶದಿಂದ ಸರ್ಕಾರ ಗ್ರಂಥಾಲಯವನ್ನು ಪ್ರಾರಂಭಮಾಡಿದೆ ಎಂದು ದೊಡ್ಡಕಮರವಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಕೀರ್ತಿ. ಟಿ ಜಿ ತಿಳಿಸಿದರು. ತಾಲೂಕಿನ ದೊಡ್ಡಕಮರವಳ್ಳಿಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ, ಮಾಹಿತಿ ಮತ್ತು ಅರಿವು ಕೇಂದ್ರ ಉದ್ಘಾಟನೆ ಮಾಡಿ ಮಾತನಾಡಿದ ಅವರು ಗ್ರಾಮೀಣ ಸಮುದಾಯಗಳಲ್ಲಿ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಡಿಜಿಟಲ್ ಅಂತರವನ್ನು ಕಡಿಮೆ ಮಾಡುವ…
ಐದು ದಿನಗಳ ಕಾಲ ವೈವಿಧ್ಯಮಯ ದಸರಾ ಕವಿಗೋಷ್ಠಿ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಪ್ರಯುಕ್ತ ದಸರಾ ಕವಿಗೋಷ್ಠಿ ಉಪಸಮಿತಿಯ ವತಿಯಿಂದ ಅಕ್ಟೋಬರ್ 13 ರಿಂದ 17ರವರೆಗೆ ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ. ಸಭಾಂಗಣದಲ್ಲಿ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಕವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಬಾರಿಯ ದಸರಾ ಮಹೋತ್ಸವದಲ್ಲಿ ಯುವ ಕವಿಗೋಷ್ಠಿ, ಚಿಗುರು ಕವಿಗೋಷ್ಠಿ, ಹಾಸ್ಯ, ಚುಟುಕು ಗೋಷ್ಠಿ, ಜನಪದ ಕಾವ್ಯಗೋಷ್ಠಿ ಹಾಗೂ ಪ್ರಧಾನ ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಯುವ ಕವಿಗೋಷ್ಠಿಗೆ ಅರ್ಜಿ ಸಲ್ಲಿಸುವವರು…
ವರಮಹಾ ಲಕ್ಷ್ಮಿ ಪೂಜೆಯಲ್ಲಿ ಸೌಹಾರ್ದತೆ ಸಂದೇಶ
ಮೈಸೂರು: ವರಮಹಾ ಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ಲಕ್ಷ್ಮಿ ಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಲಕ್ಷ್ಮಿವಿಗ್ರಹವನ್ನು ಭಕ್ತಿಭಾವದಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾ ಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ ಪರಸ್ಪರ ಸೌಹಾರ್ದತೆ, ಸಹೋದರತ್ವ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು…
ದಸರಾ ಮಹೋತ್ಸವ-2026: ಮಹಾರಾಜ ಮೈದಾನದಲ್ಲಿ ಆಹಾರ ಮೇಳ ಆಯೋಜನೆ
ಮೈಸೂರು ; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ಮೈಸೂರು ದಸರಾ ಮಹೋತ್ಸವ-2026ರ ಅಂಗವಾಗಿ ನಗರದ ಮಹಾರಾಜ ಮೈದಾನದಲ್ಲಿ ಅಕ್ಟೋಬರ್ 11 ರಿಂದ 25 ರವರೆಗೆ ಆಹಾರ ಮೇಳವನ್ನು ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗುತ್ತದೆ.ಈ ಜನಪ್ರಿಯ ಆಹಾರ ಮೇಳದಲ್ಲಿ ಭಾಗವಹಿಸಲು ಅರ್ಹ ವ್ಯಕ್ತಿಗಳು, ರೆಸ್ಟೋರೆಂಟ್‌ಗಳು, ಸಾವಯವ ಕೃಷಿಕರು ಹಾಗೂ ಸಂಘ-ಸAಸ್ಥೆಗಳಿAದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ದಸರಾ ಆಹಾರ ಮೇಳವು ದಕ್ಷಿಣ ಮತ್ತು ಉತ್ತರ ಕರ್ನಾಟಕದ ಸಾಂಪ್ರದಾಯಿಕ ಶೈಲಿ, ಭಾರತದ ವಿವಿಧ ರಾಜ್ಯಗಳ ಖಾದ್ಯಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಚೈನೀಸ್,…
- 1
- 2