Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವರಮಹಾ ಲಕ್ಷ್ಮಿ ಪೂಜೆಯಲ್ಲಿ ಸೌಹಾರ್ದತೆ ಸಂದೇಶ


ಮೈಸೂರು: ವರಮಹಾ ಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ಲಕ್ಷ್ಮಿ ಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಲಕ್ಷ್ಮಿವಿಗ್ರಹವನ್ನು ಭಕ್ತಿಭಾವದಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾ ಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ ಪರಸ್ಪರ ಸೌಹಾರ್ದತೆ, ಸಹೋದರತ್ವ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಕವಿತಾ , ವೀಣಾ, ರಮ್ಯಾ ,ಯಶಸ್ವಿನಿ, ಅಮ್ರೀನ್, ಫಾತಿಮಾ, ನಜೀರ ಬೇಗಮ್, ಐರನ್, ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.