Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಐದನೇ ದಿನಕ್ಕೆ ಅಂತ್ಯ


*ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು
ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ಐದನೇ ದಿನವಾದ ಶುಕ್ರವಾರ ಅಂತ್ಯಗೊಳಿಸಲಾಯಿತು. ಪ್ರತಿಭಟನೆಯ ನೇತೃತ್ವವಹಿಸಿದ್ದ ಮುಖಂಡರುಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಐದನೇ ದಿನ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಾರ್ವಜನಿಕರ ಹಣದ ದುರುಪಯೋಗಕ್ಕೆ ಉತ್ತರದಾಯಿತ್ವ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮೈಸೂರು ವಿಭಾಗದ ಬಿಜೆಪಿ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ, ಹಗರಣದ ಆರೋಪ ಹೊತ್ತಿದ್ದವರಿಗೆ ಮತ್ತೆ ಸಚಿವ ಸ್ಥಾನ ನೀಡಿದ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬಣ್ಣ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿ. ಹರ್ಷವರ್ಧನ್ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು, ನಿಗಮ-ಮಂಡಳಿಗಳ ಮಾಜಿ ಅಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.