ನಗರದ ಮೂಲಸೌಕರ್ಯಗಳ ಸುಧಾರಣೆ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ‘ಬೆಟರ್ ಸಿಟಿ’ ಅಭಿಯಾನಮೈಸೂರು: ‘ಭಾರತೀಯ ಯುವ ಕಾಂಗ್ರೆಸ್ ವತಿಯಿಂದ ನಗರದ ಮೂಲಸೌಕರ್ಯಗಳ ಸುಧಾರಣೆ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ‘ಬೆಟರ್ ಸಿಟಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಐವೈಸಿಯ ಕೇರಳ ಉಸ್ತುವಾರಿ ನಾಗೇಶ್ ಕರಿಯಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳನ್ನು ಅಭಿಯಾನಕ್ಕೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ಮೈಸೂರು ನಗರವೂ ಒಂದಾಗಿದೆ. ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ನಾವು ಶ್ರಮಿಸಲಿದ್ದೇವೆ’ ಎಂದು ಹೇಳಿದರು.ಈ…
Day: August 22, 2026
ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 23.ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸುತ್ತೂರಿನ ಜೆ.ಎಸ್.ಎಸ್. ಶಾಲೆಯ ಅಲ್ಲಮಪ್ರಭು ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಶಶಿಧರ ಶೆಟ್ಟಿ ಅವರು ಭಾಗವಹಿಸಿ ಪೋಕ್ಸೋ ಕಾಯ್ದೆಯ ಮಕ್ಕಳ ಸುರಕ್ಷತೆ ಕುರಿತು…
ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಒಂದು ತಿಂಗಳು ವಿಸ್ತರಣೆಮೈಸೂರು; ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದಲ್ಲಿ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ…
ಕೇವಲ 10 ದಿನಕ್ಕೆ ಕಬಿನಿ ಜಲಾಶಯದಲ್ಲಿದ್ದ 10 ಅಡಿ ನೀರು ತಮಿಳುನಾಡಿನ ಪಾಲು !
*ಜಲಾಶಯದಲ್ಲಿದ್ದ 6 ಟಿಎಂಸಿ ನೀರು ಖಾಲಿಮೈಸೂರು: ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ನಿರಂತರವಾಗಿ ಪ್ರತಿನಿತ್ಯವೂ ತಮಿಳುನಾಡಿಗೆ ಒಂದು ಟಿಎಂಸಿ ನೀರು ಹರಿಸುತ್ತಿರುವುದರಿಂದ ಜಲಾಶಯದಲ್ಲಿದ್ದ 10 ಅಡಿ ನೀರು ಅಂದರೆ 6 ಟಿಎಂಸಿ ನೀರು ಕೇವಲ 10 ದಿನಕ್ಕೆ ಖಾಲಿಯಾಗಿದೆ. ಈ ನೀರನ್ನು ನದಿ ಮೂಲಕ ತಮಿಳುನಾಡಿಗೆ ಹರಿಸಲಾಗಿದೆ. ಇದರಿಂದಾಗಿ ಜಲಾಶಯದ ನೀರಿನ ಮಟ್ಟ ತೀವ್ರ ಕುಸಿತ ಕಂಡಿದೆ.ಕೇರಳದ ವಯನಾಡು ಹಾಗೂ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭರ್ಜರಿಯಾಗಿ ಮಳೆಯಾಗುತ್ತಿದ್ದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ…
ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆ’ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್
ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ‘ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆ’ಯಲ್ಲಿ ಗಮನಾರ್ಹ ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.ಆರನೇ ತರಗತಿಯ ಚಿರಾಗ್ ಹೆಗಡೆ ಎಮ್. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ನಾಲ್ಕನೇ ತರಗತಿಯ ಶ್ರೀನಿಕಾ ಮಧುಕೇಶ್ವರ್ ಹೆಗಡೆ ಒಂಬತ್ತನೇ ರ‍್ಯಾಂಕ್ ಗಳಿಸಿದ್ದಾರೆ. ಪರೀಕ್ಷೆಯಲ್ಲಿ ತೋರಿದ ಅತ್ಯುತ್ತಮ ಸಾಧನೆಯ ಆಧಾರದ ಮೇಲೆ ಶಾಲೆಯ ಇನ್ನು ಹಲವು ವಿದ್ಯಾರ್ಥಿಗಳು ಸಿಎಂಎಸ್ ಮತ್ತು ಪಿಎಎಸ್ ಬಹುಮಾನಗಳಿಗೆ ಭಾಜನರಾಗಿದ್ದಾರೆ.ಸಾಧನೆಗೈದ ರ‍್ಯಾಂಕ್ ವಿಜೇತರಿಗೆ ಶಾಲೆಯಿಂದ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಹಿರಿಯರು ನಮ್ಮ ಬೇರು ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
ಮೈಸೂರು: ಹಾರ್ಟ್ ಸಂಸ್ಥೆ ಮೈಸೂರು ಹಾಗೂ ನಿರ್ಮಲ ಪ್ರೌಢ ಶಾಲೆ ಶ್ರೀ ರಾಂಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯರ ನಾಗರೀಕರ ದಿನಾಚರಣೆ ಅಂಗವಾಗಿ ಹಿರಿಯರು ನಮ್ಮ ಬೇರು ಎಂಬ ವಿಷಯದ ಕುರಿತು ಭಾಷಣ ಕಾರ್ಯಕ್ರಮ ಆಯೋಜಿಸಲಾಯಿತು,ನಿರ್ಮಲ ಪ್ರೌಢಶಾಲೆಯ ಮಕ್ಕಳು ಹಿರಿಯರು ನಮ್ಮ ಬೇರು ಎಂಬ ವಿಷಯದ ಕುರಿತು ಮಾತನಾಡಿ, ಮರ ಬೃಹದಾಕರವಾಗಿ ಗಟ್ಟಿಯಾಗಿ ಬೆಳೆಯಲು ಬೇರು ಬಹಳ ಮುಖ್ಯ, ಅದೇ ರೀತಿ ಮನೆಯು ಲವ ಲವಿಕೆಯಿಂದ ಕೂಡಿರಲು ಮತ್ತು ಯಾವುದೇ ಸಮಸ್ಯೆಗಳು ಬಾರದ ರೀತಿ ತಿದ್ದಿ ತೀಡಿಲು…
ವೈಟ್ ಟಾಪಿಂಗ್ ರಸ್ತೆ ಕಾಮಗಾರಿಗೆ ಶಾಸಕ ತನ್ವೀರ್ ಸೇಠ್ ಚಾಲನೆ
ಮೈಸೂರು ; ನಗರದ ಹೊರವಲಯದಲ್ಲಿರುವ ಮಣಿಪಾಲ್ ವೃತ್ತದಿಂದ ಮಿಲಿನಿಯಂ ವೃತ್ತದ ತನಕ 2.2ಕಿಮೀ ವೈಟ್ ಟಾಪಿಂಗ್ ರಸ್ತೆಗೆ ಎನ್‌ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಶನಿವಾರ ಭೂಮಿಪೂಜೆ ಸಲ್ಲಿಸಿ, ಕಾಮಗಾರಿಗೆ ಚಾಲನೆ ನೀಡಿದರು.ಬಳಿಕ ಮಾತನಾಡಿ, ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣದಿಂದ 12 ಪ್ರಮುಖ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ಕಾಂಕ್ರಿಟ್ ರಸ್ತೆಗೆ ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿ ನಡೆಸಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಇದರ ಸಾಮೂಹಿಕ ಶಂಕುಸ್ಥಾಪನೆ ನಡೆದಿತ್ತು, ತಾಂತ್ರಿಕ ವರದಿ…
ಗುಂಡುರಾಯರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅಪಾರ : ಹೆಚ್.ವಿ.ರಾಜೀವ್
ಮೈಸೂರು; ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆರ್. ಗುಂಡುರಾವ್ ಅವರು ರಾಜ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಹೇಳಿದರು.ಆರ್. ಗುಂಡುರಾವ್ ಅವರ 33ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ಕಲಾಮಂದಿರದ ಆವರಣದಲ್ಲಿ ಗುಂಡುರಾವ್ ಅಭಿಮಾನಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಗುಂಡುರಾಯರ ನೆನೆಪಿನಂಗಳ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು,ಗುಂಡುರಾಯರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅಪಾರ. ಬಡವರ್ಗದ ಮನೆಗೆಳಲ್ಲಿ ಸರ್ಕಾರಿ ಕೆಲಸ ನೀಡುವ ಮೂಲಕ, ಅವರ…
ದಸರಾಗೆಂದು ಮೈಸೂರಿಗೆ ಬರುವ ಗಜಪಡೆ ನಿರ್ವಹಣೆಗೆ 2 ಕೋಟಿಗೆ ಪ್ರಸ್ತಾವ !
*ಕಳೆದ ಬಾರಿ 80 ಲಕ್ಷರೂ ಖರ್ಚು ಮಾಡಲಾಗಿತ್ತು, ಈ ಬಾರಿ 2 ಕೋಟಿ ರೂ ನೀಡಲು ಬೇಡಿಕೆಮೈಸೂರು; ಈ ಬಾರಿ ವಿಜೃಂಭಣೆಯಿAದ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲೆಂದು ಕಾಡಿನಿಂದ ಅರಮನೆ ನಗರಿ ಮೈಸ್ರರಿಗೆ ಆಗಮಿಸಲಿರುವ ಗಜಪಡೆಯ 50 ದಿನಗಳಿಗೂ ಹೆಚ್ಚು ಕಾಲದ ವಿಶೇಷ ಆತಿಥ್ಯದ ಪೋಷಣೆ ಹಾಗೂ ಅವುಗಳ ನಿರ್ವಹಣೆಗಾಗಿ ಅರಣ್ಯ ಇಲಾಖೆ ಎರಡು ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ.ಕಳೆದ ವರ್ಷ 80 ಲಕ್ಷರೂಗಳನ್ನು ಗಜಪಡೆಯ ಆತಿಥ್ಯಕ್ಕೆಂದು ನೀಡಲಾಗಿತ್ತು. ಆದರೆ ಈಗ…
ಯಾವ್ಯಾವ ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದು ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಿ; ವಿಧಾನಪರಿಷತ್ ಸದಸ್ಯ ಆರ್. ರಘು ಕೌಟಿಲ್ಯ ಆಗ್ರಹ
ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಬಡಾವಣೆಗಳ ನಿರ್ಮಾಣಕ್ಕೆಂದು ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳಿಗೆ ಪ್ರತಿಯಾಗಿ 50:50ರ ಅನುಪಾತದಲ್ಲಿ ನೀಡಲಾಗಿದ್ದ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ನಗರಾಭಿವೃದ್ಧಿ ಇಲಾಖೆ ರದ್ದುಪಡಿಸಿದೆ. ಅವು ಯಾವ್ಯಾವ ನಿವೇಶನಗಳು , ಎಲ್ಲೆಲ್ಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆ ಮೂಲಕ ಕೂಡಲೇ ಪ್ರಕಟಿಸಬೇಕು’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಆರ್. ರಘು ಕೌಟಿಲ್ಯ ಆಗ್ರಹಿಸಿದರು.ಶನಿವಾರ ನಗರದ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಡಾದಿಂದ ಶೇ 50;50 ಅನುಪಾತದಡಿ ನಡೆದಿದ್ದ…