Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಅವಧಿ ಒಂದು ತಿಂಗಳು ವಿಸ್ತರಣೆ
ಮೈಸೂರು; ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದಲ್ಲಿ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.