Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದ ಮೂಲಸೌಕರ್ಯಗಳ ಸುಧಾರಣೆ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ‘ಬೆಟರ್ ಸಿಟಿ’ ಅಭಿಯಾನ
ಮೈಸೂರು: ‘ಭಾರತೀಯ ಯುವ ಕಾಂಗ್ರೆಸ್ ವತಿಯಿಂದ ನಗರದ ಮೂಲಸೌಕರ್ಯಗಳ ಸುಧಾರಣೆ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ‘ಬೆಟರ್ ಸಿಟಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಐವೈಸಿಯ ಕೇರಳ ಉಸ್ತುವಾರಿ ನಾಗೇಶ್ ಕರಿಯಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳನ್ನು ಅಭಿಯಾನಕ್ಕೆ ಆಯ್ಕೆ ಮಾಡಲಾಗಿದೆ. ಅದರಲ್ಲಿ ಮೈಸೂರು ನಗರವೂ ಒಂದಾಗಿದೆ. ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ನಾವು ಶ್ರಮಿಸಲಿದ್ದೇವೆ’ ಎಂದು ಹೇಳಿದರು.
ಈ ಅಭಿಯಾನ ಯಾರ ವಿರುದ್ಧವೂ ಅಲ್ಲ, ಯಾರ ಪರವೂ ಅಲ್ಲ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ. ಜನರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ನಾವು ಕಾರ್ಯ ನಿರ್ವಹಿಸಲಿದ್ದೇವೆ’ ಎಂದರು.
ಮೈಸೂರು ನಗರದ ಕೆಲವು ಬಡಾವಣೆಗಳಲ್ಲಿ ಇಂದಿಗೂ ಮೂಲಸೌಕರ್ಯಗಳು ಮರೀಚಿಕೆಯಾಗಿವೆ. ಹೀಗಾಗಿ, ಅವುಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ‘ಮೊದಲಿಗೆ, ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡಲಾಗುವುದು. ಅವರಿಗೆ ಸಂವಿಧಾನಬದ್ದವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಕುಡಿಯುವ ನೀರು, ಒಳಚರಂಡಿ, ಕಸವಿಲೇವಾರಿ, ಬೀದಿದೀಪ, ರಸ್ತೆಗಳು ಮೊದಲಾದ ಸಮಸ್ಯೆಗಳಿದ್ದಲ್ಲಿ ಮಹಾನಗರಪಾಲಿಕೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದು. ಅಧಿಕಾರಿಗಳು ನೀಡುವ ಸ್ಪಂದನೆಯನ್ನೂ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು’ ಎಂದರು.
ಸಾರ್ವಜನಿಕರು ಬಡಾವಣೆಗಳಲ್ಲಿ ಸಮಸ್ಯೆಗಳಿದ್ದಲ್ಲಿ, ಮೊ.ಸಂ. 98118 67474 ಸಂಖ್ಯೆಗೆ ಮಿಸ್ ಕಾಲ್ ಕೊಟ್ಟು ನೋಂದಾಯಿಸಿಕೊಳ್ಳಬಹುದು’ ಎಂದರು.
ಸುದ್ದಿಗೋಷ್ಠಿಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹೊಯ್ಸಳ ಎಂ.ಆರ್.ಇದ್ದರು