Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆ’ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್

ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ‘ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆ’ಯಲ್ಲಿ ಗಮನಾರ್ಹ ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.
ಆರನೇ ತರಗತಿಯ ಚಿರಾಗ್ ಹೆಗಡೆ ಎಮ್. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ನಾಲ್ಕನೇ ತರಗತಿಯ ಶ್ರೀನಿಕಾ ಮಧುಕೇಶ್ವರ್ ಹೆಗಡೆ ಒಂಬತ್ತನೇ ರ‍್ಯಾಂಕ್ ಗಳಿಸಿದ್ದಾರೆ. ಪರೀಕ್ಷೆಯಲ್ಲಿ ತೋರಿದ ಅತ್ಯುತ್ತಮ ಸಾಧನೆಯ ಆಧಾರದ ಮೇಲೆ ಶಾಲೆಯ ಇನ್ನು ಹಲವು ವಿದ್ಯಾರ್ಥಿಗಳು ಸಿಎಂಎಸ್ ಮತ್ತು ಪಿಎಎಸ್ ಬಹುಮಾನಗಳಿಗೆ ಭಾಜನರಾಗಿದ್ದಾರೆ.
ಸಾಧನೆಗೈದ ರ‍್ಯಾಂಕ್ ವಿಜೇತರಿಗೆ ಶಾಲೆಯಿಂದ ನಗದು ಬಹುಮಾನ ನೀಡಿ ಗೌರವಿಸಲಾಯಿತು.