Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರ ವಕೀಲರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಸ್.ಶರತ್ ಆಯ್ಕೆ

ಮೈಸೂರು; ನಗರದ ವಕೀಲರ ವಿವಿದೋದ್ದೇಶ ಸಹಕಾರ ಸಂಘದ ನಡೆದ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಸ್.ಶರತ್ ಹಾಗೂ ಉಪಾಧ್ಯಕ್ಷರಾಗಿ ಬಿ.ನಂದೀಶ್‌ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಸುಧೀರ್, ಜಂಟಿ ಕಾರ್ಯದರ್ಶಿಯಾಗಿ Z್ಪರಣ್‌ರಾಜ್ ಆಯ್ಕೆಯಾದರುಈ ಸಂದರ್ಭದಲ್ಲಿ ಮೈಸೂರಿನ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿರವರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಲೋಕೇಶ್‌ಎಸ್ ಉಪಸ್ಥಿತರಿದ್ದರು.

Read More

ಐದು ದಿನಗಳ ಕಾಲ ನಡೆದ ಬಣ್ಣದ ಮಾಂತ್ರಿಕ ಬಿ.ಎಂ.ರಾಮಚ0ದ್ರ ವಿದ್ಯಾರ್ಥಿ ನಾಟಕೋತ್ಸವ

ಮೈಸೂರು; ರಂಗಯಾನಟ್ರಸ್ಟ್ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ಒಂದು ತಿಂಗಳ ರಂಗ ಕಾರ್ಯಾಗಾರವನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸಿ, ಅದರಲ್ಲಿ ಸಿದ್ದಗೊಂಡ ನಾಟಕಗಳನ್ನು ಮೈಸೂರಿನ ಹಿರಿಯರಂಗಕರ್ಮಿ ಬಿ.ಎಂ ರಾಮಚಂದ್ರಅವರ ಹೆಸರಿನಲ್ಲಿ“ಬಣ್ಣದ ಮಾಂತ್ರಿಕ ಬಿ.ಎಂ.ರಾಮಚ0ದ್ರ ವಿದ್ಯಾರ್ಥಿ ನಾಟಕೋತ್ಸವವನ್ನು ನಗರದ ಕಲಾಮಂದಿರದಲ್ಲಿರುವ ಕಿರುರಂಗಮ0ದಿರದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳಿಂದ, ವಿದ್ಯಾರ್ಥಿಗಳಿಗಾಗಿ, ವಿದ್ಯಾರ್ಥಿಗಳಿಗೋಸ್ಕರ ಎಂಬ ಶೀರ್ಷಿಕೆಯಡಿಆಯೋಜನೆಗೊಂಡಿದ್ದ ಈ ನಾಟಕೋತ್ಸವದಲ್ಲಿ ಮೈಸೂರಿನ ಸರ್ಕಾರಿ ಪದವಿ ಪೂರ್ವಕಾಲೇಜುಒಂಟಿಕೊಪ್ಪಲು, ಸರ್ಕಾರಿ ಪದವಿ ಪೂರ್ವಕಾಲೇಜುಮಂಚೇಗೌಡನಕೊಪ್ಪಲು, ಮಹಾರಾಜಕಾಲೇಜು, ಹಾರ್ಡ್ವಿಕ್‌ಪದವಿ ಪೂರ್ವಕಾಲೇಜು, ಎಂ.ಐ.ಟಿ ಪ್ರಥಮದರ್ಜೆಕಾಲೇಜು, ಎಸ್.ಡಿ.ಎಂ ಮಹಿಳಾ…

Read More

ರೈತರ ಹಕ್ಕುಗಳ ರಕ್ಷಣೆಗೆ ಮಾರ್ಬಳ್ಳಿ ಗ್ರಾಮದಲ್ಲಿ ನೂತನ ರೈತ ಸಂಘದ ಘಟಕ ಉದ್ಘಾಟನೆ

ಮೈಸೂರು: ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದಲ್ಲಿ ನೂತನ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು.ಕಬ್ಬಿನ ಸಸಿಗೆ ನೀರು ಎರೆಯುವ ಮೂಲಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ‘ರೈತರತ್ನ’ ಕುರುಬೂರು ಶಾಂತಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪ್ರಸ್ತುತ ಕೃಷಿ ವಲಯವು ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಬೆಂಬಲ ಬೆಲೆಯ ಕೊರತೆ, ಬ್ಯಾಂಕುಗಳ ಕಠಿಣ ಸಾಲ ನೀತಿ ಹಾಗೂ ಸ್ಥಳೀಯ ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ಕಿರುಕುಳಗಳ ವಿರುದ್ಧ ಹೋರಾಡಲು ಈ ಗ್ರಾಮ…

Read More

ಸಕ್ಕರೆ ಬೆಲೆ ಏರಿಕೆಯಾದರೆ ರೈತರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ; ಕುರುಬೂರು ಶಾಂತಕುಮಾರ್

ಮೈಸೂರು; ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಸಾರ್ವಕಾಲಿಕ ಏರಿಕೆ ಕಾಣುತ್ತಿದ್ದು, ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯಿಂದ ಭಾರಿ ಲಾಭ ಗಳಿಸುತ್ತಿವೆ. ಆದರೆ ಕಬ್ಬು ಬೆಳೆಯುವ ರೈತನಿಗೆ ಮಾತ್ರ ನ್ಯಾಯಯುತ ಬೆಲೆ ಸಿಗದೆ `ಕಹಿ’ ಅನುಭವಿಸುವಚಿತಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಕ್ಕರೆ ಕಾರ್ಖಾನೆಗಳ ಶಕ್ತಿಶಾಲಿ ಲಾಬಿಗೆ ಸರ್ಕಾರಗಳು ಮಣಿಯುತ್ತಿದ್ದು, ಬೆವರು ಹರಿಸಿ ಬೆಳೆ ತೆಗೆಯುವ ರೈತರ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.ಪ್ರಸ್ತುತ ದಿನಗಳಲ್ಲಿ…

Read More

ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿ : ಶ್ರೀ ವಿದ್ಯಾವಲ್ಲಭತೀರ್ಥಸ್ವಾಮೀಜಿ

ಮೈಸೂರು : ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿಯಾಗಿದೆ ಎಂದು ಉಡುಪಿ ಶ್ರೀ ಕಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮೀಜಿ ಹೇಳಿದರುನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ 35ನೇ ಚಾತುರ್ಮಾಸದ ಅಂಗವಾಗಿ ಕ್ಲಿಯರ್ ಮೇಡಿ ರೇಡಿಯಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವಾಸನ್ ಐ ಕೇರ್ ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಭಾನುವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ…

Read More

ನಾಗೇಂದ್ರ ಅವರು ಸಚಿವ ಸ್ಥಾನವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಜಾತಿ ಮತ್ತು ಸಮುದಾಯದ ಹೆಸರನ್ನು ಬಳಸಿಕೊಳ್ಳಲು ಪ್ರಯತ್ನಿಸುವುದು ಸರಿಯಲ್ಲ; ಸಂತೋಷ್ ಕುಮಾರ್ ಬಿ.ಎಂ.

ಮೈಸೂರು; ಸಚಿವ ಬಿ. ನಾಗೇಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಪ್ರಕರಣದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ಅಕ್ರಮ ವರ್ಗಾವಣೆ ಮತ್ತು ದುರುಪಯೋಗ ಮಾಡಿಕೊಂಡಿರುವ ಆರೋಪಗಳು ಅತ್ಯಂತ ಗಂಭೀರವಾಗಿವೆ. ಇಂತಹ ಸಂದರ್ಭದಲ್ಲಿ, “ನಾನು ದಲಿತ, ಆದಿವಾಸಿ ಸಮುದಾಯಕ್ಕೆ ಸೇರಿದವನಾಗಿರುವುದರಿಂದ ಬಿಜೆಪಿ ನನ್ನನ್ನು ವಿರೋಧಿಸುತ್ತಿದೆ” ಎಂದು ಹೇಳುವುದು ಹಾಸ್ಯಾಸ್ಪದ ಎಂದು ಮೈಸೂರು ಮಹಾನಗರ ಬಿಜೆಪಿ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಟೀಕಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ 4350 ನಿವೇಶನಗಳ ಹಂಚಿಕೆಯನ್ನು ರದ್ದುಗೊಳಿಸಿ; ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 2019ರಿಂದ 2024ರ ತನಕ 50:50 ಅನುಪಾತದಲ್ಲಿ ಹಂಚಿಕೆ ಆಗಿರುವ 4350 ಬದಲಿ ನಿವೇಶನಗಳ ಹಂಚಿಕೆಯನ್ನೂ ಕೂಡಲೇ ರದ್ದುಪಡಿಸಬೇಕು’ ಎಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಭಾನುವಾರ ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಒಟ್ಟು 5 ಸಾವಿರ ಕೋಟಿ ರೂ ಮೌಲ್ಯದ 4350 ನಿವೇಶಗಳನ್ನು ಬದಲಿ ನಿವೇಶನಗಳನ್ನಾಗಿ ಹಂಚಿಕೆ ಮಾಡಿ ಭಾರೀ ಅಕ್ರಮ ಎಸಗಲಾಗಿದೆ. ಈ ನಿವೇಶನಗಳ ಹಂಚಿಕೆಯನ್ನೆಲ್ಲಾ…

Read More