
ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮೀಜಿಯವರ 35ನೇ ವರ್ಷದ ಚಾತುರ್ಮಾಸ್ಯ ವ್ರತದ ಅಂಗವಾಗಿ ವಾಗ್ಮಿ
ಚಕ್ರವರ್ತಿ ಸೂಲಿಬೆಲೆ ರವರಿಂದ ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ವಿಷಯದ ಕುರಿತಾಗಿ ಭಾಷಣ ಕಾರ್ಯಕ್ರಮವನ್ನು
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ದಾಮದಲ್ಲಿ ಆಗಸ್ಟ್ 25ರ ಮಂಗಳವಾರ ಸಂಜೆ 7 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ಹಾಗೂ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.