
ಮೈಸೂರು ; ಬುಡಕಟ್ಟು ಬಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೇಲ್ಲರೂ ಸೇರಿ ಬುಡಕಟ್ಟು ಬಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ತಿಳಿಸಿದರು.
ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆವತಿಯಿAದ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಹಾಲಯಗಳು ಕುರಿತು ಹಮ್ಮಿಕೊಂಡಿದ್ದ ರಾಷ್ಟಿçÃಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಪ್ರಕೃತಿ ಮತ್ತು ಅರಣ್ಯ ಸಂಸ್ಕöÈತಿಗೆ ವಿಶೇಷ ಸ್ಥಾನವಿದೆ. ಭಾರತೀಯ ಇತಿಹಾಸದ ಹಲವು ಪ್ರಮುಖ ಘಟ್ಟಗಳಲ್ಲಿ ಬುಡಕಟ್ಟು ಸಮುದಾಯಗಳು ಮಹತ್ವದ ಪಾತ್ರ ವಹಿಸಿವೆ. ಅವರ ಕೊಡುಗೆಗಳನ್ನು ಮುಖ್ಯವಾಹಿನಿಯ ಇತಿಹಾಸದಲ್ಲಿ ಸೂಕ್ತವಾಗಿ ದಾಖಲಿಸುವ ಅಗತ್ಯವಿದೆ ಎಂದರು. ಬುಡಕಟ್ಟು ಭಾಷೆಗಳು ಮತ್ತು ಸ್ವಾತಂತ್ರö್ಯ ಹೋರಾಟಗಾರರ ಇತಿಹಾಸವನ್ನು ದಾಖಲಿಸಿ ಸಂರಕ್ಷಿಸುವುದು, ದೇಶದ ಸಂಸ್ಕöÈತಿ, ಬುಡಕಟ್ಟು ಅಸ್ಮಿತೆ ಮತ್ತು ಸಾಂಸ್ಕöÈತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಗ್ರಹಾಲಯಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಹೇಳಿದರು.
ಭಾರತೀಯ ಇತಿಹಾಸ, ಧರ್ಮ, ಸಂಸ್ಕöÈತಿ ಹಾಗೂ ಸ್ವಾತಂತ್ರö್ಯ ಹೋರಾಟದಲ್ಲಿ ಬುಡಕಟ್ಟು ಸಮಾಜದ ಕೊಡುಗೆ ಅಪಾರವಾಗಿದೆ. ದೇಶದ ಸ್ವಾತಂತ್ರö್ಯ ಹೋರಾಟದಲ್ಲಿಯೂ ಲಕ್ಷಾಂತರ ಬುಡಕಟ್ಟು ಯೋಧರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ತಿಳಿಸಿದರು.
ಮೈಸೂರು ಪೌರಾಣಿಕ ಪರಂಪರೆ, ರಾಜವಂಶಗಳು, ಕಲೆ, ಸಾಹಿತ್ಯ, ಸಂಗೀತ ಮತ್ತು ಜಾನಪದ ಸಂಸ್ಕöÈತಿಯ ಸುದೀರ್ಘ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಗಂಗ, ಚಾಲುಕ್ಯ, ಚೋಳ, ಹೊಯ್ಸಳ, ವಿಜಯನಗರ ಅರಸರು ಹಾಗೂ ಒಡೆಯರು ಸೇರಿದಂತೆ ಹಲವು ರಾಜವಂಶಗಳ ಪ್ರಭಾವ ಈ ಪ್ರದೇಶದ ಇತಿಹಾಸದ ಮೇಲೆ ಬೀರಿದೆ ಎಂದರು.
ಪ್ರಕೃತಿ ವಿಕೋಪಗಳು ಮತ್ತು ಪ್ರವಾಹಗಳ ಸಂದರ್ಭದಲ್ಲಿ ಎತ್ತರದ ಪ್ರದೇಶಗಳು ಮತ್ತು ಬೆಟ್ಟಗುಡ್ಡಗಳಲ್ಲಿ ವಾಸಿಸುವ ಸಮುದಾಯಗಳು ತಮ್ಮ ಜೀವನ ಪದ್ಧತಿಯನ್ನು ಮುಂದುವರಿಸಿಕೊAಡು ಬಂದಿವೆ. ಈ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯಗಳನ್ನು ಮಾನವ ನಾಗರಿಕತೆಯ ಪ್ರಾಚೀನ ಜ್ಞಾನ ಮತ್ತು ಜೀವನ ಪದ್ಧತಿಯ ಪ್ರಮುಖ ಸಂರಕ್ಷಕರಾಗಿ ನೋಡಬಹುದು ಎಂದರು.
ರಾಜ್ಯ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಟಿ ರಘುಮೂರ್ತಿ ಮಾತನಾಡಿ, ಬುಡಕಟ್ಟು ಭಾಷೆಗಳು ನಶಿಸಿದರೆ ಕೇವಲ ಭಾಷೆಯಷ್ಟೇ ಅಲ್ಲದೆ, ಸಮುದಾಯದ ಸಂಸ್ಕöÈತಿ, ಪರಂಪರೆ ಹಾಗೂ ಪಾರಂಪರಿಕ ಜ್ಞಾನವೂ ನಷ್ಟವಾಗುತ್ತದೆ. ಹೀಗಾಗಿ ಬುಡಕಟ್ಟು ಭಾಷೆಗಳ ದಾಖಲಾತಿ, ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಬುಡಕಟ್ಟು ಭಾಷೆಗಳ ಸಂರಕ್ಷಣೆ ಮತ್ತು ಪುನರುಜ್ಜೀವನದ ಉದ್ದೇಶದಿಂದ ರಾಷ್ಟಿçÃಯ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ ಸಂಶೋಧನಾ ಕಾರ್ಯಗಳು ಅಭಿನಂದನಾರ್ಹವಾಗಿವೆ ಎಂದು ಅವರು ಹೇಳಿದರು.
ಬುಡಕಟ್ಟು ಭಾಷೆಗಳ ಜೀವಂತಿಕೆ, ಮಾತನಾಡುವವರ ಸಂಖ್ಯೆ, ಭೌಗೋಳಿಕ ವ್ಯಾಪ್ತಿ, ಪೀಳಿಗೆಯಿಂದ ಪೀಳಿಗೆಗೆ ಭಾಷೆಯ ವರ್ಗಾವಣೆ, ಶಿಕ್ಷಣದಲ್ಲಿ ಭಾಷೆಯ ಬಳಕೆ, ಲಿಖಿತ ಸಂಪನ್ಮೂಲಗಳು, ಡಿಜಿಟಲ್ ಸಂಪನ್ಮೂಲಗಳು ಹಾಗೂ ಈಗಾಗಲೇ ನಡೆದಿರುವ ದಾಖಲಾತಿಯ ಸ್ಥಿತಿಗತಿಗಳನ್ನು ಒಳಗೊಂಡ ಸಮಗ್ರ ಭಾಷಾ ಪ್ರೊಫೈಲ್ ರೂಪಿಸುವ ಅಗತ್ಯವಿದೆ. ಪ್ರತಿಯೊಂದು ಬುಡಕಟ್ಟು ಭಾಷೆಯ ಸ್ಥಿತಿಗತಿಯನ್ನು ವೈಜ್ಞಾನಿಕವಾಗಿ ಗುರುತಿಸಿ, ಅದರ ಆಧಾರದ ಮೇಲೆ ಸಂರಕ್ಷಣೆ, ಪುನರುಜ್ಜೀವನ ಮತ್ತು ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಿದರೆ ಹೆಚ್ಚಿನ ಪರಿಣಾಮಕಾರಿತ್ವ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.
ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕರ್ನಾಟಕದಲ್ಲಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ, ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಎಲ್ಲಾ ಸಮುದಾಯಗಳ ಅಭಿವೃದ್ಧಿ ಸಾಧಿಸಿದಾಗ ಮಾತ್ರ `ವಿಕಸಿತ ಭಾರತ’ದ ಗುರಿ ಸಾಕಾರವಾಗಲಿದೆ. ಭಾರತದ ಇತಿಹಾಸದುದ್ದಕ್ಕೂ ಬುಡಕಟ್ಟು ಸಮುದಾಯಗಳು ನೀಡಿರುವ ಕೊಡುಗೆ ಅಪಾರವಾಗಿದೆ. ವಿಕಸಿತ ಭಾರತ ನಿರ್ಮಾಣದಲ್ಲಿಯೂ ಅವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಹೇಳಿದರು.
ಪರಿಶಿಷ್ಟ ಪಂಗಡಗಳು ಹಾಗೂ ಬುಡಕಟ್ಟು ಜನಾಂಗಗಳು ತಮ್ಮ ಭಾಷೆಗಳ ಮೂಲಕ ಭಾರತೀಯ ಪರಂಪರೆ, ಚಿಂತನೆ ಮತ್ತು ಪ್ರಕೃತಿಯೊಂದಿಗಿನ ಸಂಬAಧವನ್ನು ಅಭಿವ್ಯಕ್ತಪಡಿಸುತ್ತಿವೆ. ಪ್ರಕೃತಿಯೊಂದಿಗೆ ಅತ್ಯಂತ ನಿಕಟವಾದ ಸಂಬAಧವನ್ನು ಹೊಂದಿರುವ ಸಮುದಾಯಗಳೆಂದರೆ ಬುಡಕಟ್ಟು ಸಮುದಾಯಗಳು. ಆದ್ದರಿಂದ ಅವರ ಭಾಷೆ, ಸಂಸ್ಕöÈತಿ ಮತ್ತು ಪರಂಪರೆಯನ್ನು ರಕ್ಷಿಸುವುದು ಅತ್ಯಂತ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಅನಂತ್ ಪ್ರಕಾಶ್ ಪಾಂಡೆ, ಕರ್ನಾಟಕ ಬೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರಾಮಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಬಸವರಾಜ್ ಕೋಡಗುಂಟಿ, ಪರಿಶಿಷ್ಟ ಪಂಗಡಗ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಅಶೋಕ್, ಜಂಟಿ ನಿರ್ದೇಶಕ ಡಾ.ರಾಜ್ ಕುಮಾರ್, ಉಪ ನಿರ್ದೇಶಕ ಹೆಚ್.ಎಸ್ ಗಿರಿಜಾಂಬ ಸೇರಿದಂತೆ ವಿವಿಧ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.