
ಮೈಸೂರು: ಶೋಭ ಎಲ್. ಎನ್ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ ‘ಇಪ್ಪತ್ತೊಂದನೆಯ ಶತಮಾನದ ಮಹಿಳಾ ಅಂಕಣ ಸಾಹಿತ್ಯ: ಬಹುಶಿಸ್ತೀಯ ನೆಲೆಗಳು’ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ಘೋಷಿಸಿದೆ.
ಅವರು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿಯಾದ ಡಾ.ಎಸ್.ಡಿ.ಶಶಿಕಲಾ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಶೋಭ ಅವರು ಮೈಸೂರು ನಗರದ ನಿವಾಸಿಯಾಗಿದ್ದು,
ಕೆ.ಆರ್.ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.