Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೂವರನ್ನು ಹತ್ತಿರದಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಎನ್‌ಕೌಂಟರ್ ಮಾಡಿರುವುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢ


ಹನೂರು ; ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಶಾಗ್ಯ ಅರಣ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯಿAದ ನಡೆದ ಮೂವರ ಎನ್‌ಕೌಂಟರ್ ಪ್ರಕರಣದ ಮರಣೋತ್ತರ ಹಾಗೂ ಎಫ್‌ಎಸ್‌ಎಲ್ ವರದಿಗಳು ಲಭ್ಯವಾಗಿವೆ. ಮೃತ ಅಂತೋನಿಸ್ವಾಮಿ, ಪೀಟರ್, ಕುಮಾರ್ ಅವರ ದೇಹದ ಎದೆ, ತೊಡೆ, ಹೊಟ್ಟೆ ಭಾಗಕ್ಕೆ ಗುಂಡು ಬಿದ್ದಿದ್ದು, ಒಳ ಉಡುಪಿನಲ್ಲಿ ಪ್ರೆöÊಮರ್ ಪತ್ತೆಯಾಗಿದೆ.
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತ ಅಂತೋನಿಸ್ವಾಮಿ, ಪೀಟರ್ ಮತ್ತು ಕುಮಾರ್ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಮೃತರ ದೇಹದ ಯಾವ ಭಾಗಗಳಿಗೆ ಗುಂಡುಗಳು ತಗುಲಿವೆ ಹಾಗೂ ಎಷ್ಟು ಇಂಚು ಆಳಕ್ಕೆ ನುಗ್ಗಿವೆ ಎಂಬ ಸೂಕ್ಷ÷್ಮ ವಿವರಗಳನ್ನು ಸ್ಪಷ್ಟವಾಗಿ ದಾಖಲಿಸಲಾಗಿದೆ. ಮೂವರ ಎದೆ, ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಗುಂಡೇಟುಗಳು ಬಿದ್ದಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಒಳ ಉಡುಪಿನಲ್ಲಿ ಗನ್ ಪೌಡರ್‌ನ ಪ್ರೆöÊಮರ್ ಪತ್ತೆ;
ಇನ್ನೊಂದೆಡೆ, ಎಫ್‌ಎಸ್‌ಎಲ್ ವರದಿಯಲ್ಲಿ ಮತ್ತಷ್ಟು ಗಂಭೀರ ಅಂಶಗಳು ಹೊರಬಂದಿವೆ. ಮೃತ ಅಂತೋನಿಸ್ವಾಮಿ ಮತ್ತು ಪೀಟರ್ ಅವರ ಒಳ ಉಡುಪುಗಳಲ್ಲಿ ಗನ್ ಪೌಡರ್‌ನ ಪ್ರೆöÊಮರ್ ಅಂಶಗಳು ಪತ್ತೆಯಾಗಿವೆ. ಇನ್ನು ಈ ಘಟನೆಯಲ್ಲಿ ಅತ್ಯಂತ ಹತ್ತಿರದಿಂದಲೇ ಗುಂಡಿನ ಚಕಮಕಿ ನಡೆದಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.
12 ಅರಣ್ಯ ಸಿಬ್ಬಂದಿ ವಿಚಾರಣೆ ಮಾಡಿದ ಪೊಲೀಸರು;
ಇನ್ನು ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಘಟನೆಯ ದಿನ ಸ್ಥಳದಲ್ಲಿದ್ದ ಹೊಳೆಮುರಿದಟ್ಟಿ ಹಾಗೂ ಬೇಟೆಗಾರರ ಗುಡ್ಡದ ಆಂಟಿ ಪೋಚಿಂಗ್ ಕ್ಯಾಂಪ್‌ನ ಒಟ್ಟು 12 ಮಂದಿ ಅರಣ್ಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇದರ ಜೊತೆಗೆ ಪ್ರಕರಣದ ಏಕೈಕ ಪ್ರತ್ಯಕ್ಷದರ್ಶಿಯಾದ ಮಹಿಮ್‌ದಾಸ್‌ನ ಹೇಳಿಕೆಯನ್ನೂ ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಪಾಲಿಗೆ ನಾಲ್ಕನೇ ಆರೋಪಿಯಾಗಿರುವ ಇದೇ ಮಹಿಮ್‌ದಾಸ್, ಪೊಲೀಸರ ಕೊಲೆ ತನಿಖೆಯಲ್ಲಿ ಪ್ರಮುಖ ಪ್ರತ್ಯಕ್ಷದರ್ಶಿಯಾಗಿದ್ದು, ಆತನ ಹೇಳಿಕೆ ಹಾಗೂ 12 ಮಂದಿ ಅರಣ್ಯ ಸಿಬ್ಬಂದಿ ನೀಡಿದ ವಿವರಗಳನ್ನು ತಾಳೆ ಹಾಕಿ ಘಟನೆಯ ನೈಜ ಸತ್ಯಾಸತ್ಯತೆ ಬಯಲಿಗೆಳೆಯಲು ಪೊಲೀಸರು ಮುಂದಾಗಿದ್ದಾರೆ.