ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿ ನೇಮಕ
ಮೈಸೂರು: ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆಯ ಅಂಗವಾಗಿ ಆಯೋಜಿಸಲಾಗುವ ದಸರಾ ಕವಿಗೋಷ್ಠಿ ಕಾರ್ಯಕ್ರಮಗಳಿಗಾಗಿ ಕವಿಗೋಷ್ಠಿ ಉಪಸಮಿತಿಯನ್ನು ನೇಮಕ ಮಾಡಲಾಗಿದೆ.ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ. ಎಂ. ದಾಸೇಗೌಡ ದಸರಾ ಕವಿಗೋಷ್ಠಿ ಉಪಸಮಿತಿಯ ಉಪವಿಶೇಷಾಧಿಕಾರಿಯಾಗಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ನಂಜಯ್ಯ ಹೊಂಗನೂರು ಕಾರ್ಯಾಧ್ಯಕ್ಷರಾಗಿ, ಸಿದ್ದಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ತ್ರಿವೇಣಿ ಕಾರ್ಯದರ್ಶಿಯಾಗಿ ಹಾಗೂ ದೇವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ…