Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಟಾಕ್ಸಿಕ್ ಚಿತ್ರದ ಯಶಸ್ಸಿಗೆ ರಕ್ತದಾನ ಮಾಡಿ ಬೆಂಬಲ ವ್ಯಕ್ತಪಡಿಸಿದ ಅಭಿಮಾನಿಗಳು


ಮೈಸೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಗೀತಾ ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರ ಬುಧವಾರ ವಿಶ್ವದಾದ್ಯಂತ ತೆರೆ ಕಾಣುತ್ತಿದ್ದು, ಈ ಹಿನ್ನಲೆಯಲ್ಲಿ ನಗರದ ಸಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಚಿತ್ರ ನಟ ಯಶ್ ಅಭಿಮಾನಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆಯ ವತಿಯಿಂದ ಟಾಕ್ಸಿಕ್ ಚಿತ್ರದ ಯಶಸ್ಸಿಗಾಗಿ
ರಕ್ತದಾನ ಮಾಡಿ ಬೆಂಬಲ ವ್ಯಕ್ತಪಡಿಸಿ, ವಿಶಿಷ್ಟ ರೀತಿಯಲ್ಲಿ ಶುಭ ಕೋರಿದರು. ಚಿತ್ರದ ಬಿಡುಗಡೆ ಹಿನ್ನೆಲೆ ಯಶ್ ಅಭಿಮಾನಿ ಬಳಗದ ಸದಸ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರ ಆಯೋಜಿಸಿ, ನೂರಾರು ಮಂದಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹಾಗೂ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಕೆಪಿಸಿಸಿ ಸದಸ್ಯ ನಟರಾಜ್, ಜಿ.ರಾಘವೇಂದ್ರ, ಎಸ್ ಎನ್.ರಾಜೇಶ್, ರವಿಚಂದ್ರ, ಲೋಕೇಶ್ ಹಾಗೂ ಇನ್ನಿತರರು ಹಾಜರಿದ್ದರು