Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬೆಂಗಳೂರಿನಲ್ಲಿ ಆ. 28 ರಾಜ್ಯ ಮಟ್ಟದ ಎಸ್ಸಿ, ಎಸ್ಟಿ ನೌಕರರ ಐಕ್ಯತಾ ಸಮಾವೇಶ


ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಜಾಗೃತ ನೌಕರರ ರಾಜ್ಯ ಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸಮಿತಿಯ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದರು.
ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಹಾಗೂ 20 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಿರುವ ಸುಮಾರು 24 ಸಾವಿರಕ್ಕೂ ಹೆಚ್ಚು ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರವನ್ನು ಈ ಸಮಾವೇಶದಲ್ಲಿ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರ ಬಂದು 78 ವರ್ಷ ಕಳೆಯುತ್ತಾ ಬಂದರೂ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ನೌಕರರಿಗೆ ನೀಡಬೇಕಾಗಿರುವ 17:17 ಪ್ರಮಾಣದ ಮೀಸಲಾತಿಯನ್ನೂ ನೀಡಬೇಕು. ದಿನನಿತ್ಯ ಜಾತಿ ತಾರತಮ್ಯದಿಂದ ಮಾನಸಿಕ ಹಿಂಸೆ ಅನುಭವಿಸುತ್ತಿರುವ ನೌಕರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ಸಂವಿಧಾನದ ಆದೇಶದ ಅನ್ವಯ ಎಸ್ಸಿ ಎಸ್ಟಿ ನೌಕರರಿಗೆ ಸೌಲಭ್ಯಗಳು ದೊರೆಯದೇ ಇರುವುದು, ಎನ್ ಪಿ ಎಸ್ ರದ್ದುಗೊಳಿಸಿ ಒಪಿಎಸ್ ಜಾರಿ ಮಾಡುವುದು ಹಾಗೂ ಕಾನೂನು ಬದ್ಧವಾಗಿ ಬಡ್ತಿ ನೀಡುವುದು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಈ ಸಮಾವೇಶದ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಈ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಲಿದ್ದು, ಸಮಾವೇಶದ ಅಧ್ಯಕ್ಷತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶದ ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ. ಜತೆಗೆ ರಾಜ್ಯದ ಅನೇಕ ಸಚಿವರುಗಳು, ಶಾಸಕರುಗಳು ಈ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾವೇಶದ ನೇತೃತ್ವವನ್ನು ರಾಜ್ಯಾಧ್ಯಕ್ಷರಾದ ಡಿ.ಶಿವಶಂಕರ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯ್ ಕುಮಾರ್ ಸೇರಿದಂತೆ ಇತರೆ ರಾಜ್ಯ ಪದಾಧಿಕಾರಿಗಳು ವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಮಿತಿಯ ಸಂಚಾಲಕರಾದ ಡಿ.ಪುಟ್ಟಸ್ವಾಮಿ, ಮೈಸೂರು ಜಿಲ್ಲಾ ಖಜಾಂಚಿ ಸಿ.ಪುಟ್ಟಸ್ವಾಮಿ, ಜಿಲ್ಲಾ ಸಂಚಾಲಕ ಎನ್.ಹರೀಶ್ ಕುಮಾರ್ ಇದ್ದರು.