Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೂವರು ಎನ್‌ಕೌಂಟರ್ ಸೇರಿ ನಾಲ್ಕು ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ


ಹನೂರು; ತಾಲ್ಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರು ಶೂಟೌಟ್ ಪ್ರಕರಣ ಹಾಗೂ ವನ್ಯ ಭೇಟೆ ತಡೆ ಶಿಬಿರಗಳ ಧ್ವಂಸ, ಕಾಡಿಗೆ ಬೆಂಕಿ ಹಚ್ಚಿರುವುದು, ಅರಣ್ಯ ಇಲಾಖೆಯ ಕಚೇರಿ ಧ್ವಂಸ ಸ್ಭೆರಿದಂತೆ ಒಟ್ಟು 4 ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ ಐಜಿಪಿ)ಡಾ.ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.
ಮೂವರು ಎನ್‌ಕೌಂಟರ್ ಸಂಬAಧಿಸಿದAತೆ ದಾಖಲಿಸಿರುವ ನಾಲ್ಕು ಎಫ್‌ಐಆರ್‌ಗಳನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ.
ಹನೂರು ತಾಲೂಕಿನ ರಾಮಪುರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ, ಹನೂರು ಠಾಣೆಯಲ್ಲಿ ದಾಖಲಾದ ಮೂವರು ಬೇಟೆಗಾರರ ಎನ್‌ಕೌಂಟರ್, ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಸೇರಿದ ವಸ್ತುಗಳಿಗೆ ಹಾನಿ, ಶಿಬಿರಗಳನ್ನು ನಾಶ, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ ಹಾಗೂ ಅರಣ್ಯ ಇಲಾಖೆ ಶಿಬಿರಗಳ ನಾಶ, ಹಾನಿ ಸೇರಿ ನಾಲ್ಕು ಪ್ರಕರಣಗಳ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ.
ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಅವರಿಗೆ ಈ ಕುರಿತು ಸಂದೇಶ ರವಾನೆಯಾಗಿದ್ದು, ನಾಲ್ಕು ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾಯಿಸಲಾಗಿದೆ. ಪ್ರಕರಣಗಳ ಕಡತಗಳನ್ನು ಹೆಚ್ಚಿನ ತನಿಖೆಗಾಗಿ ಕೂಡಲೇ ಸಿಐಡಿಗೆ ವೈಯಕ್ತಿಕವಾಗಿ ಹಸ್ತಾಂತರಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಮಹಾನಿರ್ದೇಶಕರು ಈ ಪ್ರಕರಣಗಳ ಮುಂದಿನ ತನಿಖೆಯನ್ನು ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಕರಣಗಳ ತನಿಖೆ ಪೂರ್ಣಗೊಂಡ ನಂತರ ವಿವರವಾದ ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸಬೇಕು ಎಂದು ಡಾ.ಎಂ.ಎ. ಸಲೀಂ ಸೂಚಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಎನ್ ಕೌಂಟರ್‌ನಲ್ಲಿ ಅಂಥೋಣಿಸಾಮಿ, ಜಾನ್ ಪೀಟರ್ ಹಾಗೂ ಡೇವಿಡ್ ಕುಮಾರ್ ಹತ್ಯೆಯಾಗಿದ್ದರು. ಈ ಮೂವರೂ ಬೇಟೆಯಾಡುವ ಉದ್ದೇಶದಿಂದಲೇ ಅರಣ್ಯದೊಳಗೆ ಪ್ರವೇಶ ಮಾಡಿದ್ದರು. ಈ ಕಾರಣಕ್ಕಾಗಿಯೇ ನಾಡ ಬಂದೂಕು ತೆಗೆದುಕೊಂಡು ಹೋಗಿದ್ದರು ಎಂದು ಅರಣ್ಯಾಧಿಕಾರಿಗಳು ಆರೋಪಿಸಿದ್ದರು.
ಇದಕ್ಕೆ ಪೂರಕವಾಗಿ ಮೂವರ ಶವಗಳ ವೈದ್ಯಕೀಯ ಪರೀಕ್ಷೆ ನಡೆಸುವಾಗ ಸಾಕ್ಷಿಗಳು ದೊರೆತಿದ್ದವು. ಈ ಪೈಕಿ ಅಂಥೋಣಿಸಾಮಿ ಹಾಗೂ ಪೀಟರ್ ಧರಿಸಿದ್ದ ಒಳ ಉಡುಪಿನ ಜೇಬಿನಲ್ಲಿ ನಾಡ ಬಂದೂಕಿಗೆ ಬಳಸುವ ತಲಾ 5 ಅಲ್ಯೂಮಿನಿಯಮ್ ಪ್ರೆöÊಮರ್‌ಗಳು ಪತ್ತೆಯಾಗಿದ್ದವು. ನಾಡ ಬಂದೂಕುಗಳಲ್ಲಿ ಗನ್ ಪೌಡರ್ ಸ್ಫೋಟಿಸಲು ಬಳಸುವ ಅಲ್ಯೂಮಿನಿಯಮ್ ಕ್ಯಾಪ್ / ಪ್ರೆöÊಮರ್ ಬಳಸಲಾಗುತ್ತದೆ.
ಇನ್ನೂ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಮೂವರ ಮರಣೋತ್ತರ ಪರೀಕ್ಷೆಯನ್ನು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ವರದಿಯಲ್ಲಿ ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬ ಅಂಶ ದೃಢಪಟ್ಟಿದೆ. ಇದು ಸ್ಥಳೀಯ ರೈತರು ಮತ್ತು ಮೃತರ ಕುಟುಂಬಸ್ಥರ ವಾದಕ್ಕೆ ಭಾರೀ ಬಲ ತಂದಿದೆ.
ಮೃತರ ಬಟ್ಟೆ ಮತ್ತು ಚರ್ಮದ ಮೇಲೆ ಗನ್‌ಪೌಡರ್ ಕಲೆಗಳು, ಹೊಗೆಯ ಕಪುö್ಪ ಕಲೆಗಳು ಹಾಗೂ ಸುಟ್ಟ ಗಾಯಗಳು ಪತ್ತೆಯಾಗಿವೆ. ಇದು ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವುದನ್ನು ಸ್ಪಷ್ಟಪಡಿಸಿದೆ.
ದನಗಳನ್ನು ಹುಡುಕಲು ಹೋದ ಅಮಾಯಕರನ್ನು ಅರಣ್ಯ ಸಿಬ್ಬಂದಿ ಹಿಡಿದು, ಉದ್ದೇಶಪೂರ್ವಕವಾಗಿ ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಮೊದಲಿನಿಂದಲೂ ಆರೋಪಿಸುತ್ತಿದ್ದರು.
ಮರಣೋತ್ತರ ವರದಿಯು ಸಮೀಪದಿಂದಲೇ ಗುಂಡು ಹಾರಿಸಲಾಗಿದೆ ಎಂದು ಹೇಳುತ್ತಿರುವುದರಿಂದ, ಕಾರ್ಯಾಚರಣೆಯಲ್ಲಿದ್ದ ಅರಣ್ಯ ಸಿಬ್ಬಂದಿಯನ್ನು ತಕ್ಷಣವೇ ವಶಕ್ಕೆ ಪಡೆದು ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳು ಪಟ್ಟು ಹಿಡಿದಿವೆ.
ಆತ್ಮರಕ್ಷಣೆಗೆ ದಾಳಿ:
ಅರಣ್ಯ ಇಲಾಖೆಯು “ಬೇಟೆಗಾರರು ದಾಳಿ ಮಾಡಿದಾಗ ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದೆವು” ಎಂದು ಹೇಳುತ್ತಿದ್ದಾರೆ.
ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ಮ್ಯಾಜಿಸ್ಟೆçÃಟ್ ತನಿಖೆಗೆ ಆದೇಶಿಸಿದ್ದರು. ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಅದರಂತೆ ದಿನೇಶ್ ಕುಮಾರ್ ಮೀನಾ ಅವರು ಶೂಟ್‌ಔಟ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸೋಕೋ ತಂಡ, ನಕ್ಸಲ್ ನಿಗ್ರಹ ದಳ, ಬಾಂಬ್ ನಿಷ್ಕಿçಯ ದಳ ಮತ್ತು ಶ್ವಾನದಳ ಸೇರಿದಂತೆ ನುರಿತ ತಜ್ಞರ ತಂಡಗಳು ಸ್ಥಳ ಪರಿಶೀಲನೆ ನಡೆಸಿದ್ದವು.
ನಿಗದಿತ ಏಳು ದಿನಗಳಲ್ಲಿ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಸಾಧ್ಯವಾಗದ ಹಿನ್ನೆಲೆ, ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಪತ್ರ ಬರೆದು ಮೂರು ದಿನಗಳ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದರು.

ಪ್ರಕರಣದ ಅಂತಿಮ ತನಿಖಾ ವರದಿ ಇನ್ನಷ್ಟೇ ಸಲ್ಲಿಕೆಯಾಗಬೇಕಿದ್ದು, ತನಿಖಾಧಿಕಾರಿಗಳು ಯಾವ ಆಧಾರದ ಮೇಲೆ ವರದಿ ನೀಡುತ್ತಾರೆ ಎಂಬುದರ ಮೇಲೆ ಪ್ರಕರಣದ ಅಂತಿಮ ಸತ್ಯಾಂಶ ತಿಳಿಯಲಿದೆ. ಇನ್ನೂ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಗೊAಡಿದೆ ಮುಂದಿನ ದಿನಗಳಲ್ಲಿ ತನಿಖೆಯು ಮತ್ತಷ್ಟು ಚುರುಕುಗೊಳ್ಳಲಿದೆ.