
ಮೈಸೂರು: ಅರಮನೆ ನಗರಿ ಮೈಸೂರಿನ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲ್ಲಿಸಿರುವ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆ ಇದೀಗ ಮುಂದಾಗಿದೆ.
ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382 ಪರಿತ್ಯಕ್ತ/ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ತೆರವುಗೊಳಿಸುವ ನೋಟಿಸ್ ಅಂಟಿಸುವ ಕಾರ್ಯಕ್ಕೆ ಮಂಗಳವಾರ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ. ಚಾಲನೆ ನೀಡಿದರು.
ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇಂತಹ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವುದರೊAದಿಗೆ, ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ಅಲ್ಲದೆ, ಕೆಲವು ವಾಹನಗಳು ತ್ಯಾಜ್ಯ ಸಂಗ್ರಹಣೆ, ಅಕ್ರಮ ಚಟುವಟಿಕೆ ಹಾಗೂ ಸೊಳ್ಳೆ ಸೇರಿದಂತೆ ರೋಗವಾಹಕಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆಯಿದೆ.
ಆದ್ದರಿಂದ, ನೋಟಿಸ್ ಅಂಟಿಸಿದ ದಿನಾಂಕದಿAದ 7 ದಿನಗಳೊಳಗಾಗಿ ಸಂಬAಧಪಟ್ಟ ವಾಹನದ ಮಾಲೀಕರು ತಮ್ಮ ವಾಹನವನ್ನು ಸದರಿ ಸ್ಥಳದಿಂದ ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನವನ್ನು ತೆರವುಗೊಳಿಸದಿದ್ದಲ್ಲಿ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 127 ಹಾಗೂ ಮೈಸೂರು ಮಹಾನಗರ ಪಾಲಿಕೆಯ ಉಪವಿಧಿಗಳು ಮತ್ತು ಪಾಲಿಕೆ ಪರಿಷತ್ತಿನ ನಿರ್ಣಯದನ್ವಯ, ವಾಹನವನ್ನು ಪರಿತ್ಯಕ್ತ/ಅನುಪಯುಕ್ತ ವಾಹನವೆಂದು ಪರಿಗಣಿಸಿ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು. ವಾಹನ ತೆರವು ಹಾಗೂ ಸಾಗಾಣಿಕೆ ವೆಚ್ಚವನ್ನು ಸಂಬAಧಪಟ್ಟ ವಾಹನದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಅಗತ್ಯವಿದ್ದಲ್ಲಿ ವಾಹನವನ್ನು ಹರಾಜು ಅಥವಾ ಸ್ಕಾç÷್ಯಪ್ ಮಾಡುವ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ನಗರಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ. ತಿಳಿಸಿದರು.
ವಾಹನ ಮಾಲೀಕರು ಪಾಲಿಕೆಯ ಕ್ರಮಕ್ಕೆ ಅವಕಾಶ ನೀಡದೆ, ನಿಗದಿತ ಅವಧಿಯೊಳಗೆ ತಮ್ಮ ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳನ್ನು ಅಡೆತಡೆಮುಕ್ತವಾಗಿಡಲು ಸಹಕರಿಸುವಂತೆ ಮನವಿ ಮಾಡಿದರು
ಈ ವೇಳೆ ಮೈಸೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.