Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯವರನ್ನು ಬಂಧಿಸಿದ ಪೊಲೀಸರು
ಮೈಸೂರು: ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪುನೀತ್ ಕೆರೆಹಳ್ಳಿ ಹಾಗೂ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಮುಖಂಡ ಪುನೀತ್ ಕೆರೆಹಳ್ಳಿ, ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ. ಆದರೆ ಜಿಲ್ಲಾಧಿಕಾರಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿ ಮೈಸೂರಿನಲ್ಲಿ ನಡೆಯುತ್ತಿರುವ ಅಕ್ರಮ ಗೋ ಕಸಾಯಿಖಾನೆಗಳ ವಿರುದ್ಧ ಯಾವ ರೀತಿಯ ಕ್ರಮವಹಿಸುತ್ತಾರೆ ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಈ ಭಾಗದಿಂದ ವ್ಯಕ್ತಿಯೊಬ್ಬ ಕರೆಮಾಡಿ ಗೋಹತ್ಯೆ ಕುರಿತು ಮಾತನಾಡುತ್ತಾನೆ. ಸವಾಲ್ ಹಾಕುತ್ತಾನೆ. ಇಂತವರ ವಿರುದ್ಧ ಕ್ರಮವಹಿಸಬೇಕು. ಈ ಬಗ್ಗೆ ಅಧಿಕಾರಿಗಳು ನಮ್ಮ ಮನವಿ ಪಡೆದು, ಸ್ಪಷ್ಟನೆ ನೀಡದಿದ್ದರೆ ನಾವು ಮೈಸೂರು ಬಿಟ್ಟು ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಎನ್.ಆರ್.ಕ್ಷೇತ್ರದಲ್ಲಿ ಗೋ ಕಸಾಯಿಖಾನೆಗಳು ನಡೆಯುತ್ತಿವೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಶಾಸಕ ತನ್ವೀರ್ ಸೇಠ್ ಕರೆ ಮಾಡಿ, ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸುತ್ತಿದ್ದಾರೆ, ಒಂದು ವೇಳೆ ಅಕ್ರಮವಾಗಿ ನಡೆಯುತ್ತಿರುವ ಕಸಾಯಿ ಖಾನೆಗಳನ್ನು ಮುಚ್ಚಿಸಿದರೆ, ನಿಮ್ಮನ್ನು ಎತ್ತಂಗಡಿ ಮಾಡಿಸುವುದಾಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಎಲ್ಲರೂ ಗುಂಪಾಗಿ ನಿಂತು, ನಾನಾ ಘೋಷಣೆಗಳನ್ನು ಕೂಗಿದರು. ನಾವು ಹಿಂದುತ್ವಕ್ಕಾಗಿ ಸಾಯಲು ಸಿದ್ಧ, ಬಂಧನಕ್ಕೆ ಹೆದರುವುದಿಲ್ಲ ಎಂದರು. ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಲು ಮುಂದಾದರು.
ಹಿAದುತ್ವ ಕಾರ್ಯಕರ್ತರು ಪುನೀತ್ ಅವರನ್ನು ಸುತ್ತುವರಿದು ಬಂಧಿಸಲು ಬಿಡಲಿಲ್ಲ. ಸ್ಥಳದಲ್ಲೇ ಮಲಗಿ ವಿರೋಧ ವ್ಯಕ್ತಪಡಿಸಿ ವಂದೇ ಮಾತರಂ, ಪೊಲೀಸ್ ದೌರ್ಜನ್ಯಕ್ಕೆ ಧಿಕ್ಕಾರ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಒಬ್ಬೊಬ್ಬರನ್ನೇ ಎಳೆದೊಯ್ದ ಪೊಲೀಸ್ ವ್ಯಾನ್‌ಗೆ ಹತ್ತಿಸಿದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಪ್ರತಿಭಟನಾಕಾರರನ್ನು ಬಂಧಿಸಿ, ವ್ಯಾನಿಗೆ ಹತ್ತಿಸಿಕೊಂಡ ಪೊಲೀಸರು ಅಲ್ಲಿಂದ ಕರೆದುಕೊಂಡು ಹೋದರು.
‘ಶಾಂತಿಯುತವಾಗಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ನೀಡಲು ಬಂದವರನ್ನು ಯಾವುದೇ ಮಾತುಕತೆ ನಡೆಸದೆ ವಶಕ್ಕೆ ಪಡೆದಿದ್ದಾರೆ. ನಮಗೆ ಕರೆ ಮಾಡಿ, ಸವಾಲು ಹಾಕಿದವನ ವಿರುದ್ಧ ಕ್ರಮವಹಿಸಿಲ್ಲ. ಮುಂದಿನ ದಿನಗಳಲ್ಲಿ ಮೈಸೂರಿಗೆ ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸುತ್ತೇವೆ’ ಎಂದು ಗುಡುಗಿದರು.
ಬೆಂಗಳೂರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಹಿಂದುತ್ವದ ಕಾರ್ಯಕರ್ತರನ್ನು ಪೊಲೀಸರು ನಗರಕ್ಕೆ ಪ್ರವೇಶಿಸುವ ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದರು. ಪ್ರತಿಭಟನೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿಯುಂಟಾಗಿತ್ತು.