Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಐಕ್ಯತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ತಾಲ್ಲೂಕು ಅಧ್ಯಕ್ಷ ಮಹದೇವ್

 

ಪಿರಿಯಾಪಟ್ಟಣ ; ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೌಕರರ ರಾಜ್ಯಮಟ್ಟದ 6 ನೇ ಐಕ್ಯತೆ ಸಮಾವೇಶವನ್ನು ಆ.28 ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ತಾಲ್ಲೂಕು ಅಧ್ಯಕ್ಷ ಮಹದೇವ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸಿ,ಎಸ್ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ ನಡೆಯುತ್ತಿದೆ. ನೌಕರರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಎಲ್ಲರೂ ಐಕ್ಯತೆಯಿಂದ ಒಂದೇ ವೇದಿಕೆಯಲ್ಲಿ ಸೇರುವುದು ಅಗತ್ಯ ಎಂದರು.

ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ 7.75 ಲಕ್ಷ ಹುದ್ದೆಗಳ ಪೈಕಿ ಸುಮಾರು 4 ಲಕ್ಷ ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಸುಮಾರು 24 ಸಾವಿರ ಬ್ಯಾಕ್ ಲಾಗ್ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಎಸ್ಸಿ,ಎಸ್ಟಿ ನೌಕರರಿಗೆ ಮೀಸಲಾತಿಯ ಪೂರ್ಣ ಪ್ರಯೋಜನ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂದು ನಡೆಯುವ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ನುಡಿಗಳನ್ನಾಡಲಿದ್ದರೆ. ಸಚಿವರಾದ ಸತೀಶ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿ ಸಚಿವರು, ಶಾಸಕರು, ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಪ್ರಗತಿಪರ ಸ್ವಾಮೀಜಿಗಳು ಹಾಗೂ ಚಿಂತಕರು ಭಾಗವಹಿಸಲಿದ್ದರೆ ಆದ್ದರಿಂದ ಪಿರಿಯಾಪಟ್ಟಣ ತಾಲ್ಲೂಕಿನಿಂದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಿದೆ ಹಾಗಾಗಿ ಎಸ್ಸಿ ಎಸ್ಟಿ ನೌಕರರ ಸಂಘದ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶ ಯಶಸ್ಸುಗೊಳಿಸಬೇಕು ಎಂದು ಮನವಿ ಮಾಡಿದರು.

 ಸುದ್ದಿಗೋಷ್ಠಿಯಲ್ಲಿ ಆಯಿತನಹಳ್ಳಿ ಗಣೇಶ್ ಉಪಸ್ಥಿತರಿದ್ದರು.